ಬೆಂಗಳೂರು: ಪ್ರಸಕ್ತ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ಉಚಿತ ತರಬೇತಿಗೆ ನೀಡಲಿದ್ದು, ಇಂದು ಚಾಲನೆ ನೀಡಲಾಗುತ್ತದೆ.
ಉಚಿತ ಆನ್ಲೈನ್ ತರಗತಿಗಳ ಮೂಲಕ ಸಿಇಟಿ, ನೀಟ್, ಜೆಇಇ ಪರೀಕ್ಷೆಗಳಿಗೆ ತರಬೇತಿ ನೀಡಲು ಸರ್ಕಾರ ನಿರ್ಧರಿಸಿದ್ದು, ಈ ಮಹತ್ವಾಕಾಂಕ್ಷಿ ಯೋಜನೆಗೆ ಇಂದು ಚಾಲನೆ ನೀಡಲಾಗುವುದು.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಬುಧವಾರ ಬೆಳಗ್ಗೆ 10.30ಕ್ಕೆ ವಿಧಾನಸೌಧದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆನ್ಲೈನ್ ತರಗತಿಗಳಿಗೆ ಚಾಲನೆ ನೀಡಲಿದ್ದಾರೆ.
ವೈದ್ಯಕೀಯ, ಇಂಜಿನಿಯರಿಂಗ್, ಆಯುಷ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ರಾಜ್ಯದ ಸಿಇಟಿ, ಕೇಂದ್ರದ ನೀಟ್, ಐಐಟಿಗಳ ಪ್ರವೇಶಕ್ಕೆ ನಡೆಯುವ ಜೆಿಇ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸರ್ಕಾರದಿಂದ ಉಚಿತ ತರಬೇತಿ ನೀಡಲಾಗುತ್ತದೆ.