HomeKarnatakaಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಡಿ. 9 ರಿಂದ 20ರವರೆಗೆ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ: ಅಧಿಕೃತ ಅಧಿಸೂಚನೆ ಪ್ರಕಟ

ಬೆಂಗಳೂರು: ರಾಜ್ಯ ವಿಧಾನ ಮಂಡಲ ಚಳಿಗಾಲದ ಅಧಿವೇಶನ ಡಿಸೆಂಬರ್ 9 ರಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯಲಿದೆ.

ಡಿಸೆಂಬರ್ 9 ರಿಂದ 20ರವರೆಗೆ 10 ದಿನಗಳ ಕಾಲ ವಿಧಾನ ಮಂಡಲ ಉಭಯ ಸದನಗಳ ಅಧಿವೇಶನ ನಡೆಯಲಿದೆ. ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ವಾಕ್ಸಮರಕ್ಕೆ ಚಳಿಗಾಲದ ಅಧಿವೇಶನ ಸಾಕ್ಷಿಯಾಗುವ ಸಾಧ್ಯತೆ ಇದೆ. ಅಧಿವೇಶನ ನಡೆಸುವ ಕುರಿತ ಸಚಿವ ಸಂಪುಟ ಸಭೆಯ ತೀರ್ಮಾನಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಈ ಸಂಬಂಧ ಸರ್ಕಾರ ಅಧಿಕೃತ ಅಧಿಸೂಚನೆ ಹೊರಡಿಸಿದೆ.

ಈಗಾಗಲೇ ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಬೆಳಗಾವಿಗೆ ಭೇಟಿ ನೀಡಿ ಎಲ್ಲಾ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಂತೆಯೇ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular