HomeKarnatakaಶುಭ ಸುದ್ದಿ: ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿ

ಶುಭ ಸುದ್ದಿ: ರಾಜ್ಯಾದ್ಯಂತ ಏಕಕಾಲಕ್ಕೆ 2200 ಲೈನ್ ಮನ್ ಗಳ ನೇಮಕಾತಿ

ಚಾಮರಾಜನಗರ: ರಾಜ್ಯದಲ್ಲಿ 2200 ಲೈನ್ ಮನ್ ಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ರಾಜ್ಯಾದ್ಯಂತ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಲೈನ್ ಮನ್ ಗಳ ನೇಮಕಾತಿ ಮಾಡಿಕೊಳ್ಳುವ ಸಂದರ್ಶನವನ್ನು ಒಂದೇ ದಿನದಲ್ಲಿ ಕೈಗೊಳ್ಳಲಾಗುವುದು. ಈ ಹಿಂದೆ ಬೇರೆ ಬೇರೆ ದಿನಗಳಲ್ಲಿ ಬೇರೆ ಬೇರೆ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಹುದ್ದೆಗಳು ಖಾಲಿ ಉಳಿಯುತ್ತಿದ್ದವು ಎಂದರು

ಹುದ್ದೆಗಳು ಖಾಲಿ ಉಳಿಯದಂತೆ ಏಕಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವ ಮಹತ್ವದ ತೀರ್ಮಾನ ಮಾಡಲಾಗಿದೆ. ರಾಜ್ಯದಾದ್ಯಂತ ಏಕಕಾಲದಲ್ಲಿ 2200 ಲೈನ್ ಮ್ಯಾನ್ ಗಳ ನೇಮಕಾತಿ ಪ್ರಕ್ರಿಯೆ ನಡೆಸಲು ನಿರ್ಧರಿಸಿದ್ದು, ಸ್ಥಳೀಯರಿಗೆ ಹೆಚ್ಚು ಉದ್ಯೋಗಾವಕಾಶ ಸಿಗಲಿದೆ. ಈ ಹಿಂದೆ ಲೈನ್ ಮನ್ ಗಳ ನೇಮಕಾತಿ ಏಕಕಾಲದಲ್ಲಿ ನಡೆಯದೇ ಒಂದು ಕಡೆ ಅರ್ಜಿ ಸಲ್ಲಿಸಿದವರು ಮತ್ತೊಂದು ಜಿಲ್ಲೆಗೂ ಅರ್ಜಿ ಹಾಕುತ್ತಿದ್ದರು. ಉದ್ಯೋಗ ಪಡೆದವರು ಕರ್ತವ್ಯಕ್ಕೆ ಹಾಜರಾಗುತ್ತಿರಲಿಲ್ಲ. ಇನ್ನು ಮುಂದೆ ಇಂತಹ ಸಮಸ್ಯೆಯಾಗುವುದಿಲ್ಲ ಎಂದು ಸಚಿವರು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular