ಬೆಂಗಳೂರು: ನಕ್ಸಲ್ ನಾಯಕ ವಿಕ್ರಂ ಗೌಡ ಹಲವು ನಕ್ಸಲ್ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾದ್ದ. ನಕ್ಸಲ್ ಚಟುವಟಿಕೆಯನ್ನು ನಿಗ್ರಹಿಸಲು ಆತನನ್ನು ಎನ್ ಕೌಂಟರ್ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಕ್ಸಲ್ ಚಟುವಟಿಕೆಯಲ್ಲಿ ಪ್ರಮುಖವಾಗಿ ಭಾಗಿಯಾಗಿದ್ದ ವಿಕ್ರಂ ಗೌಡ ನನ್ನು ಎನ್ ಕೌಂಟರ್ ನಲ್ಲಿ ಹತನಾಗಿರುವ ಬಗ್ಗೆ ಪ್ರಗತಿಪರ ಚಿಂತಕರು ಅನುಮಾನ ವ್ಯಕ್ತಪಡಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ, ವಿಕ್ರಂಗೌಡಗೆ ಶರಣಾಗುವಂತೆ ಆದೇಶ ನೀಡಲಾಗಿತ್ತು. ಆದರೆ ಶರಣಾಗಿರಲಿಲ್ಲ. ವಿಕ್ರಂ ಗೌಡನನ್ನು ಹಿಡಿದವರಿಗೆ ಕೇರಳ ಸರ್ಕಾರ 25 ಲಕ್ಷ ಹಾಗೂ ಕರ್ನಾಟಕ ಸರ್ಕಾರ 5 ಲಕ್ಷ ಬಹುಮಾನವನ್ನು ಘೋಷಿಸಿತ್ತು ಎಂದು ವಿವರಿಸಿದರು.
ನಕ್ಸಲ್ ಚಟುವಟಿಗಳನ್ನು ನಿಯಂತ್ರಿಸಲು ವಿಕ್ರಂ ಗೌಡನನ್ನು ಎನ್ ಕೌಂಟರ್ ಮಾಡಲಾಗಿದೆ. ನಕ್ಸಲ್ ಚಟುವಟಿಕೆಗಳಿಗೆ ಯಾವುದೇ ಕಾರಣಕ್ಕೂ ಅವಕಾಶವಿಲ್ಲ ಎಂದು ತಿಳಿಸಿದರು.