ಬೆಂಗಳೂರು: ರಾಜ್ಯದಲ್ಲಿ 22 ಲಕ್ಷ ಅನರ್ಹ ಬಿಪಿಎಲ್ ಕಾರ್ಡ್ ದಾರರು ಇದ್ದಾರೆ ಎಂಬ ಮಾಹಿತಿ ಬಹಿರಂಗಗೊಂಡಿದೆ. ಅನರ್ಹ ಬಿಪಿಎಲ್ ಕಾರ್ಡ್ ರದ್ದು ಮಾಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಗೃಹಲಕ್ಷ್ಮೀ ಯೋಜನೆ ಹಣಕ್ಕೂ ಸಮಸ್ಯೆಯಾಗಲಿದೆಯೇ ಎಂಬ ಆತಂಕ ಶುರುವಾಗಿದೆ.
22 ಲಕ್ಷ ಬಿಪಿಎಲ್ ಕಾರ್ಡ್ ದಾರರನ್ನು ಎಪಿಎಲ್ ಕಾರ್ಡ್ ದಾರರನ್ನಾಗಿ ಪರಿವರ್ತನೆ ಮಾಡುತ್ತಿರುವ ಕೆಲಸ ನಡೆದಿದೆ. ಬಿಪಿಎಲ್ ನಿಂದ ಎಪಿಎಲ್ ಗೆ ವರ್ಗಾವಣೆಯಾದವರಿಗೆ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಸಿಗುವುದಿಲ್ಲವೇ? ಎಂಬ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸ್ಪಷ್ಟನೆ ನೀಡಿದ್ದಾರೆ.
ಒಂದು ವೇಳೆ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಕಾರ್ಡ್ ಗೆ ವರ್ಗಾವಣೆಯಾದರೂ ಗೃಹಲಕ್ಷ್ಮೀ ಹಣಕ್ಕೆ ಸಮಸ್ಯೆಯಾಗುವುದಿಲ್ಲ. ಎಪಿಎಲ್ ಕಾರ್ಡ್ ಗೆ ವರ್ಗಾವಣೆಯಾದರೂ ಗೃಹಲಕ್ಷ್ಮೀ ಹಣ ಸಿಗಲಿದೆ. ಬಂದ್ ಆಗಲ್ಲ. ಬಿಪಿಎಲ್ ಜೊತೆಗೆ ಎಪಿಎಲ್ ಕಾರ್ಡ್ ದಾರರಿಗೂ ಗೃಹಲಕ್ಷ್ಮೀ ಹಣ ಸಿಗುತ್ತದೆ ಎಂದು ತಿಳಿಸಿದ್ದಾರೆ.