ನವದೆಹಲಿ: ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯ ಮತದಾನ ಮುಕ್ತಾಯವಾಗುತ್ತಿದ್ದಂತೆ ವಿವಿಧ ಸಂಸ್ಥೆಗಳು ಮತದಾನೋತ್ತರ ಸಮೀಕ್ಷೆಯನ್ನು ಪ್ರಕಟಿಸಿವೆ.
ಮಹಾರಾಷ್ಟ್ರದ 288 ಕ್ಷೇತ್ರಗಳಲ್ಲಿ ಬಹುಮತಕ್ಕೆ 145 ಸ್ಥಾನಗಳಲ್ಲಿ ಜಯಗಳಿಸಬೇಕಿದೆ.
ಲೋಕಪಾಲ್ ಸಮೀಕ್ಷೆಯ ಪ್ರಕಾರ ಮಹಾರಾಷ್ಟ್ರದಲ್ಲಿ ಎನ್.ಡಿ.ಎ. 152 ರಿಂದ 160, ಮಹಾವಿಕಾಸ ಅಘಾಡಿ 130 ರಿಂದ 138, ಇತರರು 6 ಸ್ಥಾನಗಳಲ್ಲಿ ಜಯಗಳಿಸುವ ಸಾಧ್ಯತೆ ಇದೆ.
ಬಹುತೇಕ ಸಮೀಕ್ಷೆಗಳಲ್ಲಿ ಮಹಾರಾಷ್ಟ್ರದಲ್ಲಿ ಎನ್‌ಡಿಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂದು ತಿಳಿಸಲಾಗಿದೆ. ಲೋಕಪಾಲ್ ಸಮೀಕ್ಷೆ ಪ್ರಕಾರ ಮಹಾ ವಿಕಾಸ ಅಘಾಡಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ಇದೆ.
ಪಿ ಮಾರ್ಕ್ ಸಮೀಕ್ಷೆಯ ಪ್ರಕಾರ ಮಹಾಯುತಿ ಮೈತ್ರಿಕೂಟ(NDA) 137 ರಿಂದ 157 ಸ್ಥಾನಗಳಲ್ಲಿ ಜಯಗಳಿಸಲಿದೆ. ಮಹಾವಿಕಾಸ ಅಘಾಡಿ ಮೈತ್ರಿಕೂಟ 126 ರಿಂದ 146 ಸ್ಥಾನಗಳಲ್ಲಿ ಜಯಗಳಿಸಲಿದ್ದು, ಇತರರು 7-8ರಿಂದ ಕ್ಷೇತ್ರಗಳಲ್ಲಿ ಜಯಗಳಿಸಲಿದ್ದಾರೆ ಎನ್ನಲಾಗಿದೆ.