HomeKarnatakaBIG NEWS: ಫೆ. 11ರಿಂದ 'ಇನ್ವೆಸ್ಟ್ ಕರ್ನಾಟಕ' ಜಾಗತಿಕ ಹೂಡಿಕೆದಾರರ ಸಮಾವೇಶ

BIG NEWS: ಫೆ. 11ರಿಂದ ‘ಇನ್ವೆಸ್ಟ್ ಕರ್ನಾಟಕ’ ಜಾಗತಿಕ ಹೂಡಿಕೆದಾರರ ಸಮಾವೇಶ

ಬೆಂಗಳೂರು: ಮುಂದಿನ ವರ್ಷದ ಫೆಬ್ರವರಿ 11 ರಿಂದ 14ರವರೆಗೆ ಇನ್ವೆಸ್ಟ್ ಕರ್ನಾಟಕ- 2025 ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ ಎಂದು ಬೃಹತ್ ಮತ್ತು ಮಾಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಕುರಿತ ಉನ್ನತ ಅಧಿಕಾರಿಗಳು ಮತ್ತು ಕೈಗಾರಿಕಾ ಸಂಘಗಳ ಪ್ರತಿನಿಧಿಗಳೊಂದಿಗೆ ಸಭೆ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕರ್ನಾಟಕವು ಹೂಡಿಕೆಗೆ ಅತ್ಯುತ್ತಮ ತಾಣ ಎಂಬುದನ್ನು ವಿಶ್ವಕ್ಕೆ ಮನದಟ್ಟು ಮಾಡುವ ರೀತಿಯಲ್ಲಿ ಸಮಾವೇಶ ಬಿಂಬಿಸಲಾಗುವುದು ಎಂದು ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶ ಬಂಡವಾಳ ಹೂಡಿಕೆ, ಕೈಗಾರಿಕಾ ಕ್ಷೇತ್ರದ ಬೆಳವಣಿಗೆ, ಆರ್ಥಿಕ ಅಭಿವೃದ್ಧಿ ಸೇರಿದಂತೆ ಅನೇಕ ಉದ್ದೇಶದಿಂದ ಮಹತ್ವದ್ದಾಗಿದೆ. ಸಮಾವೇಶದಲ್ಲಿ ದೇಶವಿದೇಶಗಳ ಐದು ಸಾವಿರ ಪ್ರತಿನಿಧಿಗಳು, ತಾಂತ್ರಿಕ ಪರಿಣಿತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular