ಬೆಂಗಳೂರು: ನಟ ದರ್ಶನ್ ಮತ್ತು ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಹೈಕೋರ್ಟ್ ನಲ್ಲಿ ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ನಡೆಯಲಿದೆ.
ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ದರ್ಶನ್, ಪವಿತ್ರಾ ಗೌಡ, ಆರ್. ನಾಗರಾಜು, ಅನುಕುಮಾರ್, ಎಂ. ಲಕ್ಷ್ಮಣ, ಜಗದೀಶ್ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗುವುದು.
ಅನಾರೋಗ್ಯದ ಕಾರಣಕ್ಕೆ ದರ್ಶನ್ ಮಧ್ಯಂತರ ಜಾಮೀನು ಪಡೆದುಕೊಂಡಿದ್ದಾರೆ. ಆದರೆ, ಇದುವರೆಗೂ ಸರ್ಜರಿ ಮಾಡಿಸದ ಬಗ್ಗೆ ದರ್ಶನ್ ಪ್ರತಿಕ್ರಿಯೆ ನೀಡಬೇಕಿದೆ. ಹೈಕೋರ್ಟ್ ಗೆ ಇಂದು ದರ್ಶನ್ ಪರ ವಕೀಲರು ಪ್ರತಿಕ್ರಿಯೆ ನೀಡುವ ಸಾಧ್ಯತೆ ಇದೆ.