ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಎಸ್.ಟಿ.(ಪರಿಶಿಷ್ಟ ಪಂಗಡ) ಸಂಶೋದನಾ ವಿದ್ಯಾರ್ಥಿಗಳಿಗೆ ಮಾಸಿಕ 25,000 ರೂ. ಸಾವಿರ ಶಿಷ್ಯವೇತನಕ್ಕೆ ಆಯ್ಕೆ ಮಾಡಲು ಪರಿಶಿಷ್ಟ ವರ್ಗಗಳ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಆಯವ್ಯಯದಲ್ಲಿ ಘೋಷಣೆಯಂತೆ ಯಾವುದೇ ಫೆಲೋಶಿಪ್ ಪಡೆಯದ ಎಸ್.ಟಿ. ಸಮುದಾಯಕ್ಕೆ ಸೇರಿದ ಸಂಶೋಧನಾ ವಿದ್ಯಾರ್ಥಿಗಳಿಗೆ ಫೆಲೋಶಿಫ್ ನೀಡಲಾಗುವುದು. ಡಿ.14 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು ನಗರದ ಜೆ.ಸಿ.ಆರ್.ಬಡಾವಣೆ, ಗಣಪತಿ ದೇವಸ್ಥಾನದ ಹತ್ತಿರದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಚೇರಿಯಲ್ಲಿ ಇದೇ ನ.21 ರಿಂದ ಅರ್ಜಿ ಪಡೆದು ಡಿ.14ರ ಸಂಜೆ 5.30ರೊಳಗೆ ಸಲ್ಲಿಸುವಂತೆ ಚಿತ್ರದುರ್ಗ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆ ತಿಳಿಸಿದ್ದಾರೆ.