HomeKarnatakaಮದ್ಯ ಪ್ರಿಯರೇ ಗಮನಿಸಿ : ನ.23 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ 'ಮದ್ಯ' ಮಾರಾಟ ನಿಷೇಧ

ಮದ್ಯ ಪ್ರಿಯರೇ ಗಮನಿಸಿ : ನ.23 ರಂದು ರಾಜ್ಯದ ಈ ಜಿಲ್ಲೆಗಳಲ್ಲಿ ‘ಮದ್ಯ’ ಮಾರಾಟ ನಿಷೇಧ

ನ.23 ರಂದು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ನಡೆಯುವ ಹಿನ್ನೆಲೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಸಂಡೂರು ವಿಧಾನಸಭೆ ಉಪಚುನಾವಣೆಯ ಅಂಗವಾಗಿ ನ.23 ರಂದು ಮತ ಎಣಿಕೆ ಕಾರ್ಯ ನಡೆಯಲಿದ್ದು, ಮುಕ್ತ ಹಾಗೂ ಶಾಂತಿಯುತ ನಡೆಸುವ ನಿಟ್ಟಿನಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ, 1951ರ ಕಲಂ 135-ಸಿ ಹಾಗೂ ಕರ್ನಾಟಕ ಅಬಕಾರಿ(ಸನ್ನದುಗಳ ಸಾಮಾನ್ಯ ಷರತ್ತುಗಳು) ನಿಯಮಗಳು, 1967ರ ನಿಯಮ 10-ಬಿ ಅಡಿ ಪ್ರದತ್ತವಾದ ಅಧಿಕಾರ ಚಲಾಯಿಸಿ ಬಳ್ಳಾರಿ ಜಿಲ್ಲೆಯಾದ್ಯಂತ ನ.22 ರ ಮಧ್ಯರಾತ್ರಿ 12 ಗಂಟೆಯಿಂದ ನ.24 ರ ಬೆಳಿಗ್ಗೆ 06 ಗಂಟೆಯವರೆಗೆ ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಯೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಆದೇಶಿಸಿದ್ದಾರೆ.

ದಾವಣಗೆರೆ : ಜಗಳೂರು ಪಟ್ಟಣ ಪಂಚಾಯತಿ ವಾರ್ಡ್ ನಂ.9 ರ ವ್ಯಾಪ್ತಿಯಲ್ಲಿ ನವೆಂಬರ್ 23 ರಂದು ಮತದಾನ ನಡೆಯಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ನವೆಂಬರ್ 22 ರಂದು ಸಂಜೆ 4 ಗಂಟೆಯಿಂದ ನ.24 ರ ಸಂಜೆ 6 ಗಂಟೆವರೆಗೆ ಬಾರ್ ಮತ್ತು ರೆಸ್ಟೋರೆಂಟ್, ಹೋಟೆಲ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular