alex Certify BIG NEWS : ರಾಜ್ಯದಲ್ಲಿ ‘BPL ಕಾರ್ಡ್’ ರದ್ದು ಆತಂಕ : ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ರಾಜ್ಯದಲ್ಲಿ ‘BPL ಕಾರ್ಡ್’ ರದ್ದು ಆತಂಕ : ಸಿಎಂ ಸಿದ್ದರಾಮಯ್ಯ ಮಹತ್ವದ ಸೂಚನೆ.!

ಬೆಂಗಳೂರು : ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ. ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಇಂದಿರಾ ಗಾಂಧಿಯವರ ಬದುಕು ನಮ್ಮೆಲ್ಲರಿಗೂ ಆದರ್ಶ ; ಸಿಎಂ ಸಿದ್ದರಾಮಯ್ಯ

ದೇಶದ ಐಕ್ಯತೆಗಾಗಿ ಪ್ರಾಣವನ್ನೇ ತ್ಯಾಗ ಮಾಡಿದ ಇಂದಿರಾ ಗಾಂಧಿಯವರ ಬದುಕು ನಮ್ಮೆಲ್ಲರಿಗೂ ಆದರ್ಶ. ಅವರು ಕೆಚ್ಚೆದೆಯಿಂದ ದೇಶವನ್ನು ಆಳಿದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಕಾಂಗ್ರೆಸ್ ಪಕ್ಷ ಸದಾ ಬಡವರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು, ಮಹಿಳೆಯರು, ರೈತರ ಪರವಾಗಿರುವ ಪಕ್ಷ. ಸಂವಿಧಾನದಲ್ಲಿ ಅಪಾರವಾದ ನಂಬಿಕೆ ಇಟ್ಟುಕೊಂಡು ಸಂವಿಧಾನದ ರೀತ್ಯಾ ಕೆಲಸ ಮಾಡುತ್ತಿರುವ ಪಕ್ಷ. ಯಾರೇ ಅಧಿಕಾರಕ್ಕೆ ಬಂದರೂ ಸಂವಿಧಾನದ ರೀತ್ಯಾ ಕೆಲಸ ಮಾಡಬೇಕು. ಅದರ ಧ್ಯೇಯೋದ್ದೇಶಗಳನ್ನು ಜಾರಿ ಮಾಡಬೇಕು. ಪ್ರತಿಯೊಬ್ಬರೂ ಇದನ್ನು ಪಾಲನೆ ಮಾಡಬೇಕಾದದ್ದು ಕರ್ತವ್ಯ. ಇಂದಿರಾ ಗಾಂಧಿಯವರು ಬಡವರ ಪರವಾಗಿ ಬಹಳಷ್ಟು ಕೆಲಸಗಳನ್ನು ಮಾಡಿದ್ದಾರೆ. ಭೂ ಸುಧಾರಣಾ ಕಾಯ್ದೆ, ಗರೀಬಿ ಹಟಾವೋ ಕಾರ್ಯಕ್ರಮ, ಬ್ಯಾಂಕುಗಳ ರಾಷ್ಟ್ರೀಕರಣ ಮುಂತಾದವುಗಳ ಫಲ ಬಡವರಿಗೆ ದೊರಕಬೇಕು. ಬಡವರು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿಯನ್ನು ಪಡೆದುಕೊಳ್ಳಬೇಕೆಂಬ ಉದ್ದೇಶ ಅವರಿಗೆ ಇತ್ತು. ಬ್ಯಾಂಕುಗಳು ರಾಷ್ಟ್ರೀಕರಣವಾಗುವ ಮೊದಲು ಬಡವರು ಬ್ಯಾಂಕುಗಳ ಮೆಟ್ಟಿಲುಗಳನ್ನು ಹತ್ತಲು ಸಾಧ್ಯವಾಗುತ್ತಿರಲಿಲ್ಲ. ಇಂದಿರಾ ಗಾಂಧಿಯವರು ರಾಷ್ಟ್ರೀಕರಣ ಮಾಡಿದ ನಂತರ ಬ್ಯಾಂಕುಗಳ ಬಾಗಿಲು ಬಡವರಿಗೂ ತೆರೆಯಿತು. ಇದು ಕಾಂಗ್ರೆಸ್ ಪಕ್ಷದ ಸಾಧನೆ ಎಂದಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...