HomeEntertainmentಹುಟ್ಟುಹಬ್ಬದ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಪುತ್ರಿ ಅರ್ಹಾ; instagram ನಲ್ಲಿ ವಿಶ್ ಮಾಡಿದ ʼಸ್ಟೈಲಿಶ್...

ಹುಟ್ಟುಹಬ್ಬದ ಸಂಭ್ರಮದಲ್ಲಿ ಅಲ್ಲು ಅರ್ಜುನ್ ಪುತ್ರಿ ಅರ್ಹಾ; instagram ನಲ್ಲಿ ವಿಶ್ ಮಾಡಿದ ʼಸ್ಟೈಲಿಶ್ ಸ್ಟಾರ್ʼ

ಖ್ಯಾತ ನಟ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರ ಪುತ್ರಿ ಅರ್ಹಾ ಇಂದು ಎಂಟನೇ ವಸಂತಕ್ಕೆ ಕಾಲಿಟ್ಟಿದ್ದು, ಸಾಮಾಜಿಕ ಜಾಲತಾಣದಲ್ಲಿ  ಅಲ್ಲು ಅರ್ಜುನ್ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.‌

ಅಲ್ಲು ಅರ್ಜುನ್ ತಮ್ಮ instagram ಖಾತೆಯಲ್ಲಿ ಅರ್ಹಾ ಜೊತೆಗಿನ ಫೋಟೋ ಹಂಚಿಕೊಂಡಿದ್ದು,  ”ಅಪ್ಪನ ರಾಜಕುಮಾರಿ” ಎಂದು ಬರೆದುಕೊಂಡಿದ್ದಾರೆ. ಅವರ ಪತ್ನಿ ಸ್ನೇಹ ರೆಡ್ಡಿ ಕೂಡ ಮಗಳ ಫೋಟೋ ಅಪ್ಲೋಡ್ ಮಾಡುವ ಮೂಲಕ  ವಿಶ್ ಮಾಡಿದ್ದಾರೆ.

ಸಿನಿಮಾ ವಿಚಾರಕ್ಕೆ ಬಂದರೆ ಅಲ್ಲು ಅರ್ಜುನ್ ನಟನೆಯ ‘ಪುಷ್ಪಾ 2; ದಿ ರೂಲ್’ ಮುಂದಿನ ತಿಂಗಳು ಡಿಸೆಂಬರ್ 5 ರಂದು ವಿಶ್ವದಾದ್ಯಂತ ತೆರೆ ಕಾಣಲಿದ್ದು ಭಾರತ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ಬರೆಯುವ ಲೆಕ್ಕಾಚಾರದಲ್ಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಕುಮಾರ್ ನಿರ್ದೇಶನದ ಈ ಚಿತ್ರದಲ್ಲಿ ಅಲ್ಲು ಅರ್ಜುನ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.  ಮೊದಲ ಭಾಗ ಈಗಾಗಲೇ ಭರ್ಜರಿ ಯಶಸ್ಸು ಕಂಡಿದ್ದು, ಇದರ ಮುಂದಿನ ಭಾಗದ ಮೇಲೆ ಪ್ರೇಕ್ಷಕರು ಸಾಕಷ್ಟು ನಿರೀಕ್ಷೆ ಇಟ್ಟಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular