HomeKarnatakaBIG NEWS: ಮನೆಯಿಂದ ಹೊರ ಬರುತ್ತಿದ್ದಂತೆ ಮಗುವಿನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್

BIG NEWS: ಮನೆಯಿಂದ ಹೊರ ಬರುತ್ತಿದ್ದಂತೆ ಮಗುವಿನ ಮೇಲೆ ಬೀದಿನಾಯಿ ಡೆಡ್ಲಿ ಅಟ್ಯಾಕ್

ಬಾಗಲಕೋಟೆ: ಮನೆಯಿಂದ ಹೊರಬರುತ್ತಿದ್ದಂತೆ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿರುವ ಘಟನೆ ಬಾಗಲಕೊಟೆ ಜಿಲ್ಲೆಯ ಇಳಕಲ್ ತಾಲೂಕಿನ ವಿದ್ಯಾಗಿರಿಯಲ್ಲಿ ನಡೆದಿದೆ.

ನಾಲ್ಕು ವರ್ಷದ ಮಗು ಬೀದಿ ನಾಯಿ ದಾಳಿಗೆ ಗಂಭೀರವಾಗಿ ಗಾಯಗೊಂಡಿದ್ದು, ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಟವಡಲೆಂದು ಮಗು ಮನೆಯಿಂದ ಹೊರಬಂದು ಗೇಟ್ ತೆರೆಯುತ್ತಿದ್ದಂತೆ ರಸ್ತೆಯಲ್ಲಿ ಮಲಗಿದ್ದ ಬೀದಿ ನಾಯಿಯೊಂದು ಮಗುವಿನ ಮೇಲೆ ಏಕಾಏಕಿ ದಾಳಿ ನಡೆಸಿದೆ. ಮಗುವಿನ ಕಿರುಚಾಟ ಕೇಳಿ ಮನೆಯವರು ಹೊರಬಂದಿದ್ದಾರೆ. ಅಷ್ಟರಲ್ಲಿ ಬೀದಿ ನಾಯಿ ಮಗುವನ್ನು ಕಚ್ಚಿ ಗಾಯಗೊಳಿಸಿದೆ.

ಬೀದಿ ನಾಯಿಯ ಡೆಡ್ಲಿ ಅಟ್ಯಾಕ್ ದೃಶ್ಯ ಎದುರು ಮನೆಯ ಸಿಸಿಕ್ಯಾಮರಾದಲ್ಲಿ ಸೆರೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular