HomeKarnatakaBREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

BREAKING NEWS: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ಬೆನ್ನು ನೋವು ಹಿನ್ನೆಲೆಯಲ್ಲಿ ಮಧ್ಯಂತರ ಜಾಮೀನು ಪಡೆದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಟ ದರ್ಶನ್, ಸರ್ಜರಿಗೆ ವೈದ್ಯರು ಸಲಹೆ ನೀಡಿದರೂ ಇನ್ನೂ ಸರ್ಜರಿಗೆ ಒಳಗಾಗಿಲ್ಲ. ಈ ನಡುವೆ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ಕೈಗೆತ್ತಿಕೊಂಡಿದೆ. ಈ ವೇಳೆ ಎಸ್ ಪಿಪಿ, ದರ್ಶನ್ ವೈದ್ಯಕೀಯ ವರದಿಯ ಪ್ರತಿ ನಮಗೆ ನೀಡಿಲ್ಲ ಎಂದು ತಿಳಿಸಿದ್ದಾರೆ.

ಇದೇ ವೇಳೆ ಪೊಲೀಸರು ಹೆಚ್ಚುವರಿ ಆರೋಪ ಪಟ್ಟಿಯನ್ನು ವಿಚಾರಣಾಧೀನ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಏಕಸದಸ್ಯ ಪೀಠ ಅರ್ಹತೆಯ ಮೇರೆಗೆ ಮುಂದಿನ ದಿನಾಂಕದಂದು ವಿಚಾರಣೆ ನಡೆಸಬಹುದು ಎಂದು ತಿಳಿಸಿದ್ದು, ದರ್ಶನ್ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್ 26ಕ್ಕೆ ನಿಗದಿಪಡಿಸಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular