HomeKarnatakaನ.23 ರಂದು ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ.!

ನ.23 ರಂದು ಗ್ರಾ.ಪಂ.ಉಪಚುನಾವಣೆ : ವಿವಿಧ ಸಂತೆ, ಜಾತ್ರೆಗಳ ನಿಷೇಧ.!

ಮಡಿಕೇರಿ : ಗ್ರಾಮ ಪಂಚಾಯಿತಿ ಉಪ ಚುನಾವಣೆ 2024 ರ ಮತದಾನವನ್ನು ಸುಸೂತ್ರವಾಗಿ ನಡೆಸಲು ಹಾಗೂ ಶಾಂತಿಯುತ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 36 ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿಯಲ್ಲಿ ದತ್ತವಾಗಿರುವ ಅಧಿಕಾರದಂತೆ ನೀತಿ ಸಂಹಿತೆ ಜಾರಿಯಲ್ಲಿರುವ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ನಿಡ್ತ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಮತ್ತು ಚೆಟ್ಟಳ್ಳಿ, ಪೊನ್ನಂಪೇಟೆ ತಾಲ್ಲೂಕಿನ ಟಿ.ಶೆಟ್ಟಿಗೇರಿ ಮತ್ತು ಕುಟ್ಟ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ನವೆಂಬರ್, 22 ರ ಮಧ್ಯರಾತ್ರಿ 12 ಗಂಟೆಯಿಂದ ನವೆಂಬರ್, 23 ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಸಂತೆ ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ್ ರಾಜಾ ಅವರು ಆದೇಶಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular