HomeKarnatakaBIG NEWS: ನ. 23 ರಂದು ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮಾಹಿತಿ

BIG NEWS: ನ. 23 ರಂದು ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಮಾಹಿತಿ

ಬಳ್ಳಾರಿ: ಸಂಡೂರು ವಿಧಾನಸಭೆ ಉಪಚುನಾವಣೆಯು ಸುಸೂತ್ರವಾಗಿ ನಡೆದಿದ್ದು, ಶೇ.76.02 ರಷ್ಟು ಮತದಾನವಾಗಿದೆ. ಮತ ಎಣಿಕೆ ಕಾರ್ಯವು ನ.23 ರಂದು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆಯಲಿದ್ದು, ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಸಂಡೂರು ವಿಧಾನಸಭೆ ಉಪಚುನಾವಣೆಯ ಚುನಾವಣಾಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ರಾಜೇಶ್ ಹೆಚ್.ಡಿ ಅವರು ಹೇಳಿದರು.

ಸಂಡೂರು ವಿಧಾನಸಭೆ ಉಪಚುನಾವಣೆಯ ಮತ ಎಣಿಕೆ ಕಾರ್ಯ ಕುರಿತಂತೆ ಗುರುವಾರ ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.

ನ.23 ರಂದು ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ.  ಇದಕ್ಕೂ ಮುನ್ನ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ 253 ಮತಗಟ್ಟೆಗಳ ಮತಯಂತ್ರಗಳು, 13 ಅಂಚೆ ಮತಗಳ ಎಣಿಕೆ ಮತ್ತು ಇಟಿಪಿಬಿಎಸ್-04 ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು 14+1 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸವರ‍್ಸ್ಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

ಸಂಡೂರು ವಿಧಾನಸಭೆ ಉಪ ಚುನಾವಣೆಯ ಮತ ಎಣಿಕಾ ಕಾರ್ಯಕ್ಕೆ 19 ಎಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಮೈಕ್ರೋ ಅಬ್ಸವರ್ ಗಳನ್ನು ನೇಮಕ ಮಾಡಲಾಗಿದೆ.  ಮತ ಎಣಿಕೆ ಅಧಿಕಾರಿಗಳು, ಸಹಾಯಕರಿಗೆ ಈಗಾಗಲೇ ತರಬೇತಿ ನೀಡಲಾಗಿದೆ ಎಂದರು.

ಸಂಡೂರು ವಿಧಾನಸಭೆ ಕ್ಷೇತ್ರದಲ್ಲಿ ಒಟ್ಟು 253 ಮತಗಟ್ಟೆಗಳಿದ್ದು, ಈ ಕ್ಷೇತ್ರಕ್ಕೆ ಸಂಬAಧಿಸಿದಂತೆ 19 ಸುತ್ತು ಮತ ಎಣಿಕೆ ನಡೆಯಲಿದೆ. ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮತ ಎಣಿಕೆಗೆ ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ. ಪ್ರತಿ ಹಂತದ ಮತ ಎಣಿಕೆ ವಿವರವನ್ನು ಮಾಧ್ಯಮಗಳ ಮೂಲಕ ಪ್ರಚುರಪಡಿಸಲು ಅನುವಾಗುವಂತೆ ಮಾಧ್ಯಮದವರಿಗೆ ಮತ ಎಣಿಕೆ ಕೇಂದ್ರದಲ್ಲಿ ಮಾಧ್ಯಮ ಕೇಂದ್ರವನ್ನು ತೆರೆಯಲಾಗುವುದು ಎಂದರು.

ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಬಳ್ಳಾರಿ ಜಿಲ್ಲಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಿದರು.

ಮತ ಎಣಿಕೆ ಕೇಂದ್ರವಾದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್‌ಪಿಎಫ್, ಸಿಎಎಸ್‌ಎಫ್, ಕೆಎಸ್‌ಆರ್‌ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಅವರು ತಿಳಿಸಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular