HomeInternationalBREAKING: ಪಾಕಿಸ್ತಾನದಲ್ಲಿ ರಕ್ತದ ಹೊಳೆ: ಉಗ್ರರ ಗುಂಡಿನ ದಾಳಿಯಲ್ಲಿ 50ಕ್ಕೂ ಹೆಚ್ಚು ಮಂದಿ ಬಲಿ

BREAKING: ಪಾಕಿಸ್ತಾನದಲ್ಲಿ ರಕ್ತದ ಹೊಳೆ: ಉಗ್ರರ ಗುಂಡಿನ ದಾಳಿಯಲ್ಲಿ 50ಕ್ಕೂ ಹೆಚ್ಚು ಮಂದಿ ಬಲಿ

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾದಲ್ಲಿ ಪ್ರಯಾಣಿಕರ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದರಿಂದ 50ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, 20 ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕೆಳ ಕುರ್ರಂ ಪ್ರದೇಶದಲ್ಲಿ ಗುರುವಾರ ಪ್ರಯಾಣಿಕರ ವಾಹನಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ 50ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಫ್ಘಾನಿಸ್ತಾನದ ಗಡಿಯಲ್ಲಿರುವ ಕುರ್ರಂ ಜಿಲ್ಲೆಯಲ್ಲಿ ಬಂದೂಕುಧಾರಿಗಳು ವಾಹನಗಳ ಮೇಲೆ ಹೊಂಚುದಾಳಿ ನಡೆಸಿದ್ದಾರೆ. ವಾಹನಗಳು ಪರಾಚಿನಾರ್‌ ನಿಂದ ಖೈಬರ್ ಪಖ್ತುಂಖ್ವಾದ ರಾಜಧಾನಿ ಪೇಶಾವರಕ್ಕೆ ಬೆಂಗಾವಲು ಪಡೆಯಲ್ಲಿ ಪ್ರಯಾಣಿಸುತ್ತಿದ್ದಾಗ, ಉಗ್ರರು ಗುಂಡಿನ ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾಳಿಯಲ್ಲಿ ಎಂಟು ಮಹಿಳೆಯರು ಮತ್ತು ಐದು ಮಕ್ಕಳು ಸೇರಿದಂತೆ 50 ಜನರು ಮತ್ತು 20 ಜನರು ಸಾವನ್ನಪ್ಪಿದ್ದಾರೆ. ಬಲಿಯಾದವರಲ್ಲಿ ಹೆಚ್ಚಿನವರು ಶಿಯಾ ಸಮುದಾಯಕ್ಕೆ ಸೇರಿದವರು ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular