alex Certify ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಖ್ಯ ಮಾಹಿತಿ: ನ.26 ರಿಂದ ಭದ್ರಾ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಚ್ಚುಕಟ್ಟು ಪ್ರದೇಶದ ರೈತರಿಗೆ ಮುಖ್ಯ ಮಾಹಿತಿ: ನ.26 ರಿಂದ ಭದ್ರಾ ನಾಲೆಗಳಿಗೆ ಮುಂಗಾರು ಹಂಗಾಮಿನ ನೀರು ಸ್ಥಗಿತ

ಶಿವಮೊಗ್ಗ: ಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶದ 2024-25ನೇ ಸಾಲಿನ ಮುಂಗಾರು ಹಂಗಾಮಿಗೆ ನೀರಾವರಿ ಸಲಹಾ ಸಮಿತಿ ಸಭೆಯ ತೀರ್ಮಾನದಂತೆ, ಕಛೇರಿ ಅಧಿಸೂಚನೆಯ ದಿನಾಂಕ:29.07.2024 ರಿಂದ ಭದ್ರಾ ಜಲಾಶಯದಿಂದ ನೀರನ್ನು ಹರಿಬಿಡಲಾಗಿದ್ದು, ನೀರನ್ನು ಹರಿಸುವ ಗರಿಷ್ಠ ಅವಧಿ 120 ದಿನಗಳು ದಿ:26.11.2024ಕ್ಕೆ ಪೂರ್ಣಗೊಳ್ಳಲಿದೆ.

ಆದ್ದರಿಂದ ದಿ:26.11.2024ರ ರಾತ್ರಿಯಿಂದ ಬಲದಂಡೆ ಮತ್ತು ಎಡದಂಡೆ ನಾಲೆಗಳಲ್ಲಿ ನೀರು ಹರಿಸುವುದನ್ನು ನಿಲ್ಲಿಸಲಾಗುವುದು. ಭದ್ರಾ ಜಲಾಶಯದ ಅಚ್ಚುಕಟ್ಟುದಾರರು ನಿಗಮದೊಂದಿಗೆ ಸಹಕರಿಸುವಂತೆ ಭದ್ರಾ ಯೋಜನಾ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...