ಮೈಸೂರು: ಮೈಸೂರು ರಾಜ್ಯದ ಪ್ರವಾಸಿ ತಾಣಗಳಲ್ಲಿ, ಪ್ರವಾಸಿ ಸ್ನೇಹಿ ಪೊಲೀಸ್ ವಿಂಗ್ ಸ್ಥಾಪನೆ ಮಾಡಲಾಗುವುದು ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಪ್ರವಾಸಿ ತಾಣಗಳಲ್ಲಿ ಪ್ರವಾಸಿ ಸ್ನೇಹಿ ಪೊಲೀಸರು ಬರಬೇಕು. ಈ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಪ್ರತ್ಯೇಕ ಪೊಲೀಸ್ ವಿಂಗ್ ಆರಂಭಿಸಲು ಯೋಜಿಸಲಾಗುತ್ತಿದೆ. ಹಂಪಿ ಸೇರಿದಂತೆ ಅನೇಕ ಕಡೆ ಪ್ರವಾಸಿ ಸ್ನೇಹಿ ಪೊಲೀಸರನ್ನು ನಿಯೋಜಿಸಲಿದ್ದು, ಅವರಿಗೆ ಒಂದೆರಡು ಭಾಷೆ ಕಲಿಸಲಾಗುವುದು ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆಯಿಂದಾಗಿ ಪ್ರವಾಸೋದ್ಯಮಕ್ಕೆ ಶಕ್ತಿ ಬಂದಿದೆ. ಯೋಜನೆಗಳನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ. ಪ್ರವಾಸಿ ಕೇಂದ್ರಗಳಲ್ಲಿ ರಾತ್ರಿ ಒಂದು ಗಂಟೆಯವರೆಗೆ ವ್ಯಾಪಾರ ಅಗತ್ಯ. ಹೀಗಾಗಿ ಮೈಸೂರಿನಲ್ಲಿ ನೈಟ್ ಲೈಫ್ ಗೆ ಅನುಮತಿ ಇದ್ದು, ವಾರದೊಳಗೆ ಅನುಷ್ಠಾನದ ಬಗ್ಗೆ ತೀರ್ಮಾನ ಪ್ರಕಟಿಸಲಾಗುವುದು. ಮೈಸೂರು ಪ್ರವಾಸೋದ್ಯಮ ಮತ್ತು ಆತಿಥ್ಯ ವಲಯಕ್ಕೆ ಹೆಸರಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.