ಬೆಂಗಳೂರು : ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ ಎಂಬಂತೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿದೆ.
ಹೌದು. ಸರ್ಕಾರ ರಾಜ್ಯಾದ್ಯಂತ ಬಿಪಿಎಲ್ ಕಾರ್ಡ್ ಪರಿಷ್ಕರಣೆಗೆ ಮುಂದಾಗಿತ್ತು, ಸರ್ಕಾರದ ನಡೆಗೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಸ್ಥಗಿತಗೊಳಿಸಿದೆ.
ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಬಿಪಿಎಲ್ ಕಾರ್ಡ್ ಪರಿಷ್ಕರಣೆಯನ್ನು ಸ್ಥಗಿತಗೊಳಿಸಿದೆ. ಹಾಗೂ ರದ್ದಾಗಿರುವ ಕಾರ್ಡ್ ಲಿಸ್ಟ್ ಪಡೆದು ಸರಿಪಡಿಸಲು ಸೂಚನೆ ನೀಡಲಾಗಿದೆ.
ಸರ್ಕಾರಿ ನೌಕರರು, ತೆರಿಗೆದಾರರನ್ನು ಬಿಟ್ಟು , ಬೇರೆಯಾರನ್ನೂ ಬಿಪಿಎಲ್ ಕಾರ್ಡಿನಿಂದ ತೆಗೆಯಬೇಡಿ
ಸರ್ಕಾರಿ ನೌಕರರು, ತೆರಿಗೆದಾರರನ್ನು ಬಿಟ್ಟು ಬೇರೆಯಾರನ್ನೂ ಬಿಪಿಎಲ್ ಕಾರ್ಡಿನಿಂದ ತೆಗೆಯಬೇಡಿ ಎಂದು ಸೂಚಿಸಿದ್ದೇನೆ. ಬಿಜೆಪಿಯವರು ರಾಜಕೀಯಕ್ಕಾಗಿ ಈ ವಿಚಾರವನ್ನು ಪ್ರಸ್ತಾಪಿಸುತ್ತಿದ್ದಾರೆ. ಆಹಾರ ಭದ್ರತಾ ಕಾಯ್ದೆಯನ್ನು ಜಾರಿಗೆ ತಂದಿದ್ದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು. ಇದನ್ನು ರಾಜ್ಯಸಭೆಯಲ್ಲಿ ಮಂಡಿಸಿದಾಗ ಮುರಳಿ ಮನೋಹರ್ ಜೋಶಿ ಅವರು ಅದನ್ನು ವಿರೋಧಿಸಿ ಭಾಷಣ ಮಾಡಿದ್ದಾರೆ. ಅವರ ಭಾಷಣದಲ್ಲಿ ಇದು ಆಹಾರ ಭದ್ರತಾ ಕಾಯ್ದೆಯಲ್ಲ, ಮತ ಭದ್ರತಾ ಕಾಯ್ದೆ ಎಂದು ಕರೆದಿದ್ದರು. ಅಂದರೆ ಆಹಾರ ಭದ್ರತಾ ಕಾಯ್ದೆಗೆ ಅವರು ವಿರೋಧವಾಗಿದ್ದರು. ಇಂಥವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.