HomeKarnataka'ಪರಿಶಿಷ್ಟ ಪಂಗಡ'ದ ಸಂಶೋಧನಾ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

‘ಪರಿಶಿಷ್ಟ ಪಂಗಡ’ದ ಸಂಶೋಧನಾ ವಿದ್ಯಾರ್ಥಿಗಳಿಂದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

ಬೆಂಗಳೂರು : ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ ಯಾವುದೇ ಫೆಲೋಶಿಪ್ ಪಡೆಯದಿದ್ದಲ್ಲಿ ಮಾಸಿಕ ರೂ. 25,000/- ಗಳಂತೆ ಶಿಷ್ಯ ವೇತನ ನೀಡಲು ಆಫ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕಛೇರಿಯಿಂದ ಅರ್ಜಿ ನಮೂನೆಯನ್ನು ಪಡೆದು ಡಿಸೆಂಬರ್ 14 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿ- 08029787448, ದೇವನಹಳ್ಳಿ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027681784, ದೊಡ್ಡಬಳ್ಳಾಪುರ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027623681, ನೆಲಮಂಗಲ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 080 27723172, ಹೊಸಕೋಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಛೇರಿ- 08027931528 ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular