HomeKarnatakaಮೀನುಗಾರಿಕೆ ವೇಳೆ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಮೀನುಗಾರಿಕೆ ವೇಳೆ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ: ಡಿಸಿಎಂ ಡಿ.ಕೆ. ಶಿವಕುಮಾರ್

ಮೀನುಗಾರರ ಬದುಕನ್ನು ಹಸನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆಗೆ ತೆರಳಿದಾಗ ಅಪಾಯಕ್ಕೆ ಸಿಲುಕಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇನ್ನು ಮುಂದೆ 10 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ.

ಸಮುದ್ರವನ್ನು ನಂಬಿಕೊಂಡು ಮೀನುಗಾರರು ಜೀವನ ನಡೆಸುತ್ತಾರೆ. ರೈತರು ಕೃಷಿ ಭೂಮಿಯಲ್ಲಿ ಕೃಷಿ ಮಾಡುವಂತೆಯೇ ಮೀನುಗಾರರು ತಮ್ಮ ಜೀವ ಕೈಯಲ್ಲಿ ಹಿಡಿದುಕೊಂಡು ಸಮುದ್ರದಲ್ಲಿ ಕೃಷಿ ಮಾಡುತ್ತಾರೆ. ಡೀಸೆಲ್ ಬೆಲೆ ಇಳಿಕೆ, ಸಬ್ಸಿಡಿ ಸೇರಿ ವಿವಿಧ ಬೇಡಿಕೆ ಈಡೇರಿಸುವಂತೆ ಮೀನುಗಾರರು ಬೇಡಿಕೆ ಇಟ್ಟಿದ್ದು, ಅವರ ಎಲ್ಲ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular