ಬೆಂಗಳೂರು: ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್ ಕಾರ್ಡ್‌ಗಳು ಎಪಿಎಲ್ ಕಾರ್ಡ್‌ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ ಕಾರ್ಡ್ ಹಾಗೂ ನಂಬರ್ ಬಳಸಿ ಹಿಂದಿನಂತೆಯೇ ಆಹಾರ ಧಾನ್ಯ ಪಡೆಯಲೂ ಅವಕಾಶ ಕಲ್ಪಿಸಲಾಗುತ್ತದೆ.
ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖ (2)ರ ನಡವಳಿಯಲ್ಲಿ ಆದ್ಯತಾ ಪಡಿತರ ಚೀಟಿಯನ್ನು ನೀಡಲು ಸರ್ಕಾರದಿಂದ ನಿಗಧಿಪಡಿಸಿರುವ ಮಾನದಂಡಗಳನ್ನು ಪರಿಶೀಲಿಸಿ ಅನರ್ಹ ಪಡಿತರ ಚೀಟಿಗಳನ್ನು ರದ್ದುಗೊಳಿಸಲು ಕ್ರಮ ವಹಿಸುವಂತೆ ಸೂಚಿಸಲಾಗಿತ್ತು.
ಈ ಸಂಬಂಧ ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ, ಉಳಿದಂತೆ ತೆಗೆದುಕೊಂಡಿರುವ ಕ್ರಮವನ್ನು ಮರುಸ್ತಾಪಿಸಲು ಕೂಡಲೇ ಕ್ರಮ ವಹಿಸಲು ಉಲ್ಲೇಖ (1)ರ ಸರ್ಕಾರದ ಪತ್ರದಲ್ಲಿ ನಿರ್ದೇಶಿಸಲಾಗಿರುತ್ತದೆ. ಹಾಗೂ ಈ ಮರುಸ್ತಾಪನೆ ಕ್ರಮವು ಕೇವಲ ಉಲ್ಲೇಖ (2)ರ ಸಭಾ ನಡವಳಿಯಲ್ಲಿ ನೀಡಿರುವ ನಿರ್ದೇಶನದ ಕ್ರಮಕ್ಕೆ ಮಾತ್ರ ಅನ್ವಯವಾಗುವಂತೆ ಈ ಕೆಳಕಂಡಂತೆ ಕ್ರಮ ವಹಿಸಲು ಆದೇಶಿಸಿದೆ.
ಸದರಿ ಮರುಸ್ತಾಪನೆ ಕಾರ್ಯವನ್ನು ಮಾಡಲು ಆಹಾರ ತಂತ್ರಾಂಶದಲ್ಲಿ ಜಂಟಿ/ಉಪ ನಿರ್ದೇಶಕರ ಲಾಗಿನ್ ನಲ್ಲಿ ಅವಕಾಶ ನೀಡಲಾಗಿರುತ್ತದೆ.
ನೋಡಲ್ ಅಧಿಕಾರಿ ರವರು ಉಸ್ತುವಾರಿ ವಹಿಸಿದ ಜಿಲ್ಲೆಗಳಲ್ಲಿ ಈ ಕಾರ್ಯಕ್ರಮದ ಪ್ರಗತಿಯನ್ನು ಖುದು, ಮೇಲ್ವಿಚಾರಣೆಯನ್ನು ಮಾಡುವುದು.
ಹೀಗೆ ಮುರುಸ್ತಾಪನೆಗೊಂಡಿರುವ PHH ಪಡಿತರ ಚೀಟಿಗಳಿಗೆ ಆಹಾರ ಧಾನ್ಯ ಹಂಚಿಕೆಯನ್ನು NIC ಸಹಯೋಗದೊಂದಿಗೆ ದಿನಾಂಕ: 25/11/2024 ರೊಳಗೆ ಜಂಟಿ ನಿರ್ದೇಶಕರು (ಸಂ.ವಿ) ರವರು ಕ್ರಮವಹಿಸಬೇಕು.
ಕುಟುಂಬ ತಂತ್ರಾಂಶದಿಂದ ಬಂದಿರುವ ಆದಾಯ ತೆರಿಗೆ ಪಾವತಿದಾರರು ಪಡಿತರ ಚೀಟಿಗಳ ರದ್ದತಿಯಲ್ಲಿ ಕೇವಲ ಆದಾಯ ತೆರಿಗೆ ಪಾವತಿದಾರರ ಪಡಿತರ ಚೀಟಿಗಳನ್ನು ಮಾತ್ರವೇ ರದ್ದು/ಅಮಾನತ್ತು/ಪರಿವರ್ತನೆ ಆಗುವಂತೆ ಆಯಾ ಜಂಟಿ/ಉಪ ನಿರ್ದೇಶಕರು ರವರು ಕ್ರಮವಹಿಸತಕ್ಕದ್ದು, ಇದಕ್ಕೆ ತಕ್ಕಂತೆ ಪೂರಕ ದಾಖಲೆಗಳನ್ನು ಪಡೆದು ಪ್ರತಿಯೊಂದು ಪಡಿತರ ಚೀಟಿದಾರರ ದಾಖಲೆಗಳನ್ನು ಕಡತಗಳಲ್ಲಿ ಇರಿಸುವುದು.
ಈ ಎಲ್ಲಾ ಕಾರ್ಯಗಳನ್ನು ಜಾಗೃತಿ ವಹಿಸಿ ಯಾವುದೇ ಅರ್ಹ ಫಲಾನುಭವಿಗಳಿಗೆ ಅನ್ಯಾಯ ವಾಗದಂತೆ ಕ್ರಮ ವಹಿಸುವುದು.
ದಿನಾಂಕ: 25/11/2024 ರೊಳಗೆ ಮೂರ್ಣಗೊಳಿಸತಕ್ಕದ್ದು ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ತಿಳಿಸಿದೆ.