alex Certify ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟ: ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಪ್ರಕಟ: ಮಧ್ಯಾಹ್ನದೊಳಗೆ ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ

ಬೆಂಗಳೂರು: ಚನ್ನಪಟ್ಟಣ, ಸಂಡೂರು, ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಲಿದ್ದು, ಮಧ್ಯಾಹ್ನದೊಳಗೆ ಫಲಿತಾಂಶ ಪ್ರಕಟವಾಗಲಿದೆ.

ಸಮೀಕ್ಷೆಗಳ ಪ್ರಕಾರ ಎನ್.ಡಿ.ಎ. 2, ಕಾಂಗ್ರೆಸ್ 1 ಸ್ಥಾನ ಗಳಿಸಲಿದೆ ಎನ್ನಲಾಗಿದೆ. ಸಮೀಕ್ಷೆಯೇ ಸತ್ಯವಲ್ಲ, ನಿಖರವಾದ ಫಲಿತಾಂಶ ಮಧ್ಯಾಹ್ನದೊಳಗೆ ಪ್ರಕಟವಾಗಲಿದ್ದು, ಸೋಲು ಗೆಲುವಿನ ಲೆಕ್ಕಾಚಾರಕ್ಕೆ ತೆರೆ ಬೀಳಲಿದೆ.

ಮತ ಎಣಿಕೆ ಕಾರ್ಯವು ನ.23 ರಂದು ಕೇಂದ್ರ ಚುನಾವಣಾ ಆಯೋಗದ ಮಾರ್ಗದರ್ಶನದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಬೆಳಿಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ.  ಇದಕ್ಕೂ ಮುನ್ನ 7 ಗಂಟೆಗೆ ಭದ್ರತಾ ಕೊಠಡಿ ತೆರೆಯಲಾಗುವುದು. ಮತ ಎಣಿಕೆ ಕೇಂದ್ರದಲ್ಲಿ ಮತಗಟ್ಟೆಗಳ ಮತಯಂತ್ರಗಳು, ಅಂಚೆ ಮತಗಳ ಎಣಿಕೆ ಮತ್ತು ಇಟಿಪಿಬಿಎಸ್-04 ಮತ ಎಣಿಕೆ ಕಾರ್ಯ ನಡೆಯಲಿದೆ.

ಮತ ಎಣಿಕೆ ಕಾರ್ಯವನ್ನು ಸುಗಮವಾಗಿ ಕೈಗೊಳ್ಳಲು ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಪ್ರತಿ ಟೇಬಲ್‌ಗೆ ಒಬ್ಬರು ಎಣಿಕಾ ಮೇಲ್ವಿಚಾರಕರು, ಒಬ್ಬರು ಎಣಿಕಾ ಸಹಾಯಕರು, ಒಬ್ಬರು ಮೈಕ್ರೋ ಅಬ್ಸವರ್ ಗಳನ್ನು ನಿಯೋಜಿಸಲಾಗಿದೆ.

ಮತ ಎಣಿಕಾ ಕಾರ್ಯಕ್ಕೆ 19 ಎಣಿಕಾ ಮೇಲ್ವಿಚಾರಕರು, 21 ಎಣಿಕಾ ಸಹಾಯಕರು ಮತ್ತು 20 ಎಣಿಕಾ ಮೈಕ್ರೋ ಅಬ್ಸವರ್ ಗಳನ್ನು ನೇಮಕ ಮಾಡಲಾಗಿದೆ.

ಮತ ಎಣಿಕೆ ಕೇಂದ್ರ ಸುತ್ತಲೂ 100 ಮೀಟರ್ ಪ್ರದೇಶ ಆವರಣದಲ್ಲಿ ವಾಹನಗಳ ಪ್ರವೇಶವಿರುವುದಿಲ್ಲ. ಮತ ಎಣಿಕೆ ಅಂಗವಾಗಿ ಆಯಾ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮತ ಎಣಿಕೆ ಕೇಂದ್ರದ ಸುತ್ತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ. ಅದರಲ್ಲಿ ಸಿಆರ್‌ಪಿಎಫ್, ಸಿಎಎಸ್‌ಎಫ್, ಕೆಎಸ್‌ಆರ್‌ಪಿ ಮತ್ತು ಸಿವಿಲ್ ಪೊಲೀಸ್ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...