HomeIndiaBREAKING : ವಯನಾಡ್ ಉಪಚುನಾವಣೆ ಫಲಿತಾಂಶ : ಪ್ರಿಯಾಂಕಾ ಗಾಂಧಿಗೆ 1 ಲಕ್ಷ ಮತಗಳ...

BREAKING : ವಯನಾಡ್ ಉಪಚುನಾವಣೆ ಫಲಿತಾಂಶ : ಪ್ರಿಯಾಂಕಾ ಗಾಂಧಿಗೆ 1 ಲಕ್ಷ ಮತಗಳ ಭರ್ಜರಿ ಮುನ್ನಡೆ.!

ಕೇರಳ : ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಫಲಿತಾಂಶವನ್ನು ಚುನಾವಣಾ ಆಯೋಗ ಇಂದು ಪ್ರಕಟಿಸುತ್ತಿದೆ. ಕೇರಳದ ವಯನಾಡ್ ಕ್ಷೇತ್ರದ ಲೋಕಸಹಾ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರು ತಮ್ಮ ಪ್ರತಿಸ್ಪರ್ಧಿಗಳಾದ ಸಿಪಿಐ (ಎಂ) ನ ಸತ್ಯನ್ ಮೊಕೇರಿ ಮತ್ತು ಬಿಜೆಪಿಯ ನವ್ಯಾ ಹರಿದಾಸ್ ವಿರುದ್ಧ 1 ಲಕ್ಷಕ್ಕೂ ಹೆಚ್ಚು ಮತಗಳನ್ನು ಗಳಿಸಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನವೆಂಬರ್ 13ರಂದು ಉಪಚುನಾವಣೆ ನಡೆದಿತ್ತು. ಅಣ್ಣ ರಾಹುಲ್ ಗಾಂಧಿ ಕ್ಷೇತ್ರಕ್ಕೆ ತಂಗಿ ಪ್ರಿಯಾಂಕಾ ಗಾಂಧಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಅಲ್ಲದೇ ಇದು ಪ್ರಿಯಾಂಕಾ ಗಾಂಧಿಯವರಿಗೆ ಮೊದಲ ಚುನಾವಣೆಯಾಗಿದೆ.

ವಯನಾಡ್ ಭೂಕುಸಿತವನ್ನು “ರಾಷ್ಟ್ರೀಯ ವಿಪತ್ತು” ಎಂದು ಘೋಷಿಸಲು ನಿರಾಕರಿಸಿದ್ದಕ್ಕಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಯನಾಡ್ ಚುನಾವಣಾ ಪ್ರಚಾರದ ಸಮಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular