ಹಾವೇರಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಾದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣ ಕ್ಷೇತ್ರಗಳ ಉಪಚುನವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಗೆಲುವಿನತ್ತ ದಾಪುಗಾಲಿಟ್ಟಿದೆ.
ಈಗಾಗಲೇ ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ‍್ನ ತುಕಾರಾಂ ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಗೆಲುವಿನತ್ತ ಮುನ್ನುಗ್ಗಿದ್ದು, ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಗೆ ಹಿನ್ನಡೆಯಾಗಿದೆ.
ಇನ್ನು ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಭಾರಿ ಹಿನ್ನಡೆಯಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮುನ್ನಡೆ ಸಾಧಿಸಿದ್ದಾರೆ. ಮತ ಎಣಿಕೆ ಮುಕ್ತಾಯಕ್ಕೆ ಇನ್ನು ಕೆಲ ಸಮಯ ಮಾತ್ರ ಬಾಕಿಯಿದೆ. ತೀವ್ರ ಹಿನ್ನಡೆಯಾಗುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಮತ ಎಣಿಕೆ ಕೇಂದ್ರದಿಂದಲೇ ಹೊರ ನಡೆದಿದ್ದಾರೆ.