ಬೆಂಗಳೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನ ಮನ್ನಣೆ ನೀಡಿದ್ದಾರೆ. ಉಪಚುನಾವಣೆಯ ಈ ಫಲಿತಾಂಶ 2028ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ. ಮುಂದಿನ ಚುನಾವಣೆಯಲ್ಲಿಯೂ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂಬ ಸಂದೇಶವನ್ನು ಜನ ರವಾನಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ ಶಿವಕುಮಾರ್, ಈ ಗೆಲುವಿಗೆ ನಮ್ಮ ಗ್ಯಾರಾಂಟಿ ಯೋಜನೆಗಳು, ಸಿಎಂ ಸಿದ್ದರಾಮಯ್ಯ ಅವರ ನಾಯಕತ್ವ ಹಾಗೂ ಕಾರ್ಯಕರ್ತರ ಪರಿಶ್ರಮ ಕಾರಣ. ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿದ ಮತದಾರರಿಗೆ ಧನ್ಯವಾದ. ಕೈ ಹಿಡಿದ ಜನತೆಗೆ ನಮಸ್ಕಾರ. ಇದು ನೀವು ಕೊಟ್ಟಿರುವ ಸಾಲ ಬಹಳ ಜವಾಬ್ದಾರಿಯಿಂದ ಅಭಿವೃದ್ಧಿಕಾರ್ಯಗಳ ಮೂಲಕ ಸಾಲ ತೀರಿಸುತ್ತೇವೆ ಎಂದರು.
ನಾವು ಜನರ ಭಾವನೆಗಳ ಮೇಲೆ ರಾಜಕಾರಣ ಮಾಡಲ್ಲ. ಬದುಕಿನ ಮೇಲೆ ರಾಜಕಾರಣ ಮಾಡಬೇಕು. ಜನ ನಮಗೆ ಆಶಿರ್ವಾದ ಮಾಡಿದ್ದಾರೆ. ನಮ್ಮ ಯೋಜನೆಗಳನ್ನು, ಅಭಿವೃದ್ಧಿ ಕಾರ್ಯಗಳಿಗೆ ಜನರು ಮತ ಹಾಕಿದ್ದಾರೆ ಎಂದರು.
ಗ್ಯಾರಂಟಿ ಯೋಜನೆಗಳ ಕುರಿತು ವಿಪಕ್ಷಗಳು ಅಪಪ್ರಚಾರ ಮಾಡುತ್ತಿದ್ದರು. ಗ್ಯಾರಂಟಿ ಯೋಜನೆಗಳಿಗೆ ಹಾಗೂ ಅಭಿವೃದ್ಧಿಗೆ ಹಣವಿಲ್ಲ ಎಂದು ಸುಳ್ಳು ಹೇಳುತ್ತಿದ್ದರು. ಈಗ ಜನರು ನಮ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಅಭಿವೃದ್ಧಿ ಕೆಲಸಗಳಿಂದಾಗಿಯೇ ಮತ ನಿದುವ ಮೂಲಕ ವಿಪಕ್ಷಗಳಿಗೆ ಉತ್ತರ ನೀಡಿದ್ದಾರೆ. ಸನೀಕ್ಷೆಗಳು ಸುಳ್ಲಾಗಲಿವೆ ಎಂದು ನಾನು ನಿನ್ನೆಯೇ ಹೇಳಿದ್ದೆ. ನಾವು ಮಾಡಿರುವ ಸಮೀಕ್ಷೆ ಬೇರೆಯೇ ಇದೆ ಅಂತಾ ಹೇಳಿದ್ದೆ. ಜನರು ಗ್ಯಾರಂಟಿ ಹಾಗೂ ಅಭಿವೃದ್ಧಿ ಮೆಚ್ಚಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿದ್ದಾರೆ. ಇದು ಕಾಂಗ್ರೆಸ್ ಗೆ ಹಾಗೂ ಸರ್ಕಾರಕ್ಕೆ ಇನ್ನಷ್ಟು ಶಕ್ತಿ ನೀಡಿದೆ ಎಂದು ಹೇಳಿದರು.