ಬೆಂಗಳೂರು : 3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ಅನುಭವಿಸಿದೆ. ಉಪಚುನಾವಣೆ ನಡೆದ ಮೂರೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಗೆ ತೀವ್ರ ಹೊಡೆತ ನೀಡಿದೆ.
ಬಿಜೆಪಿಗೆ ಸೋಲಿಗೆ ಕಾರಣ ಏನು..? ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದೆನು..ಮುಂದೆ ಓದಿ.
ಕೊನೆ ಕ್ಷಣದಲ್ಲಿ ಅಭ್ಯರ್ಥಿ ಘೋಷಣೆ ಮಾಡಿದ್ದು ಬಿಜೆಪಿ ಸೋಲಿಗೆ ಕಾರಣ. ನಾವು ಒಂದು ವರ್ಷ, ಆರು ತಿಂಗಳಿಂದಲೇ ಅಭ್ಯರ್ಥಿ ತಯಾರು ಮಾಡಿ ಬಿಟ್ಟಿದ್ದರೆ ಮೂರು ಕ್ಷೇತ್ರಗಳಲ್ಲಿ ಒಳ್ಳೆಯ ಫಲಿತಾಂಶ ಬರುತ್ತಿತ್ತು ಎಂದು ಆರ್ ಅಶೋಕ್ ಹೇಳಿದ್ದಾರೆ.
ನಾವು ಕೊನೆಯ ಹಂತದಲ್ಲಿ ಚುನಾವಣೆ ಘೋಷಣೆ ಆದಮೇಲೆ ಅಭ್ಯರ್ಥಿ ತಯಾರು ಮಾಡಿದ್ದೆ ಸೋಲಿಗೆ ಹಿನ್ನೆಡೆ ಆಯ್ತು ಎಂದು ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದರು.ಚನ್ನಪಟ್ಟಣ ಮತ್ತು ಶಿಗ್ಗಾಂವಿಯಲ್ಲಿ ಕೊನೆಯವರೆಗೂ ನಾವು ಅಭ್ಯರ್ಥಿ ಘೋಷಿಸಿರಲಿಲ್ಲ. ಬೇಗ ಅಭ್ಯರ್ಥಿ ಘೋಷಣೆ ಮಾಡಿದ್ದು ಕಾಂಗ್ರೆಸ್ಗೆ ಪ್ಲಸ್ ಪಾಯಿಂಟ್ ಆಗಿದೆ. ರಾಜೀನಾಮೆ ಕೊಟ್ಟ ಕೂಡಲೇ ನಮ್ಮ ಅಭ್ಯರ್ಥಿ ಘೋಷಣೆ ಮಾಡಿದ್ದರೆ ಗೆಲುವು ನಮ್ಮದೇ ಆಗುತಿತ್ತು ಎಂದಿದ್ದಾರೆ.