HomeIndiaBREAKING : ವಯನಾಡಿನಲ್ಲಿ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ, 5 ಲಕ್ಷ ಮತಗಳ ಭರ್ಜರಿ ಗೆಲುವು.!

BREAKING : ವಯನಾಡಿನಲ್ಲಿ ದಾಖಲೆ ಮುರಿದ ಪ್ರಿಯಾಂಕಾ ಗಾಂಧಿ, 5 ಲಕ್ಷ ಮತಗಳ ಭರ್ಜರಿ ಗೆಲುವು.!

ವಯನಾಡು ಲೋಕಸಭಾ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಪ್ರಿಯಾಂಕಾ ಗಾಂಧಿ ಬರೋಬ್ಬರಿ 541741 ಮತಗಳನ್ನು ಗಳಿಸಿದ್ದು, ಬರೋಬ್ಬರಿ 357580 ಮತಗಳಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಈ ಮೂಲಕ ವಯನಾಡಿನಲ್ಲಿ ಪ್ರಿಯಾಂಗಾ ಗಾಂಧಿ ಗೆಲುವು ಖಚಿತವಾಗಿದೆ. ನಿರೀಕ್ಷೆಗೂ ಮೀರಿದ ಮತಗಳ ಅಂತರದಲ್ಲಿ ಪ್ರಿಯಾಂಕಾ ಗಾಂಧಿ ವಯನಾಡು ಕ್ಷೇತ್ರದಲ್ಲಿ ಗೆದ್ದು ಬೀಗಿದ್ದಾರೆ.

ಆರಂಭದಿಂದಲೂ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಭಾರಿ ಮುನ್ನಡೆ ಕಾಯ್ದುಕೊಂಡಿದ್ದರು.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆದಿತ್ತು. ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ, ಬಿಜೆಪಿ ಅಭ್ಯರ್ಥಿಯಾಗಿ ನವ್ಯಾ ಹರಿದಾಸ್ ಹಾಗೂ ಎಲ್ ಡಿ ಎಫ್ ಅಭ್ಯರ್ಥಿಯಾಗಿ ಸತ್ಯನ್ ಮೊಕೆರಿ ಸ್ಪರ್ಧಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular