HomeKarnatakaಪೋಷಕರಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ಹೆಚ್ಚುವರಿ LKG, ಇಂಗ್ಲಿಷ್ ಮೀಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ

ಪೋಷಕರಿಗೆ ಗುಡ್ ನ್ಯೂಸ್: ಶಾಲೆಗಳಲ್ಲಿ ಹೆಚ್ಚುವರಿ LKG, ಇಂಗ್ಲಿಷ್ ಮೀಡಿಯಂ ಆರಂಭಿಸಲು ಶಿಕ್ಷಣ ಇಲಾಖೆ ಸಮ್ಮತಿ

ಬೆಂಗಳೂರು: ರಾಜ್ಯದ ಶಾಲೆಗಳಲ್ಲಿ ಹೆಚ್ಚುವರಿ ಎಲ್ಕೆಜಿ ಮತ್ತು ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಶಿಕ್ಷಣ ಇಲಾಖೆ ಅನುಮೋದನೆ ನೀಡಿದೆ.

ರಾಜ್ಯದ 42 ಶಾಲೆಗಳಲ್ಲಿ ಎಲ್ಕೆಜಿ, 51 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ವಿಭಾಗ ತೆರೆಯಲಾಗುವುದು. ಪ್ರಸಕ್ತ ಶೈಕ್ಷಣಿಕ ವರ್ಷದ ಆರಂಭದಲ್ಲಿ ರಾಜ್ಯದ 7 ಜಿಲ್ಲೆಗಳಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪೂರ್ವ ಪ್ರಾಥಮಿಕ ಶಾಲೆಗಳನ್ನು ಆರಂಭಿಸಲಾಗಿದ್ದು, ಇದೀಗ ಮತ್ತೆ 42 ಶಾಲೆಗಳಿಗೆ ಎಲ್‌ಕೆಜಿ ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತರು ಅನುಮತಿ ನೀಡಿದ್ದಾರೆ.

286 ಪಬ್ಲಿಕ್ ಶಾಲೆಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳು ದಾಖಲಾದ ಹಿನ್ನೆಲೆಯಲ್ಲಿ 51 ಶಾಲೆಗಳಲ್ಲಿ ಹೆಚ್ಚುವರಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ತಿಳಿಸಲಾಗಿದೆ. ಹೊಸದಾಗಿ ಆಂಗ್ಲ ಮಾಧ್ಯಮ ವಿಭಾಗ ಆರಂಭಿಸಲು ಒಂದನೇ ತರಗತಿಯಿಂದ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮಕ್ಕೆ ಅವಕಾಶ ನೀಡಲು ಹೆಚ್ಚುವರಿ ವಿಭಾಗ ಮಂಜೂರು ಮಾಡಲು ಪ್ರಸ್ತಾವನೆ ಸಲ್ಲಿಸುವಂತೆ ಇತ್ತೀಚೆಗೆ ಶಿಕ್ಷಣ ಇಲಾಖೆ ಸೂಚನೆ ನೀಡಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular