HomeEntertainmentಇಂದು ಬಿಡುಗಡೆಯಾಗಲಿದೆ 'ಪುಷ್ಪ 2' ಚಿತ್ರದ 'ಕಿಸ್ಸಿಕ್' ಹಾಡು

ಇಂದು ಬಿಡುಗಡೆಯಾಗಲಿದೆ ‘ಪುಷ್ಪ 2’ ಚಿತ್ರದ ‘ಕಿಸ್ಸಿಕ್’ ಹಾಡು

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ 2’ ಮುಂದಿನ ತಿಂಗಳು ಡಿಸೆಂಬರ್ 5 ರಂದು ವಿಶ್ವಾದ್ಯಂತ ತೆರೆ ಮೇಲೆ ಅಪ್ಪಳಿಸಲಿದ್ದು, ಅವರ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಈ ಚಿತ್ರದ ಮತ್ತೊಂದು ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಲಿದೆ ‘ಕಿಸ್ಸಿಕ್’ ಎಂಬ ಈ ಹಾಡಿನಲ್ಲಿ ಅಲ್ಲು ಅರ್ಜುನ್ ಜೊತೆ ನಟಿ ಶ್ರೀ ಲೀಲಾ ಹೆಜ್ಜೆ ಹಾಕಿದ್ದು, ಚೆನ್ನೈನ ಲಿಯೋ ಮುತ್ತು ಇಂಡೋರ್ ಕ್ರೀಡಾಂಗಣದಲ್ಲಿ ಈ ಹಾಡು  ರಿಲೀಸ್ ಆಗಲಿದೆ. ಲೋತಿಕ ಹಾಗೂ ಸುಬ್ಲಹ್ಶಿನಿ  ಧ್ವನಿಯಾಗಿದ್ದು,  ರಕೀಬ್ ಆಲಂ ಸಾಹಿತ್ಯ ಬರೆದಿದ್ದಾರೆ.

ಸುಕುಮಾರ್ ನಿರ್ದೇಶನದ ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡಿದ್ದು ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಸೇರಿದಂತೆ ಫಹದ್ ಫಾಸಿಲ್, ಜಗಪತಿ ಬಾಬು, ಧನುಂಜಯ, ರಮೇಶ್, ಸುನಿಲ್, ಅನಸೂಯಾ ಭಾರದ್ವಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ದೇವಿ ಶ್ರೀಪ್ರಸಾದ್ ಸಂಗೀತ ಸಂಯೋಜನೆ ನೀಡಿದ್ದು, ನವೀನ್ ನೂಲಿ  ಸಂಕಲನವಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular