ಮುಂಬೈ: ಮಹಾರಾಷ್ಟ್ರ ಚುನಾವಣಾ ಫಲಿತಾಂಶದ ಬಳಿಕ ಸಿಎಂ ಆಯ್ಕೆ ಕಗ್ಗಂಟು ಶುರುವಾಗಿದೆ. 288 ಸದಸ್ಯ ಬಲದ ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ 234 ಸ್ಥಾನ ಗಳಿಸಿದೆ.
ಬಿಜೆಪಿ ಪ್ರಚಂಡ ಗೆಲುವಿನಿಂದ ಏಕನಾಥ್ ಶಿಂಧೆ ಸಿಎಂ ಪಟ್ಟದ ಆಸೆಗೆ ತಣ್ಣೀರೆರಚಿದಂತಾಗಿದೆ. ಬೇರೆ ಪಕ್ಷದವರು ಸಿಎಂ ಆಗುವ ಸಾಧ್ಯತೆ ಕ್ಷೀಣಿಸಿದೆ. ಸಿಂಗಲ್ ಪಕ್ಷವಾಗಿ ಬಹುಮತಕ್ಕೆ ಬಿಜೆಪಿಗೆ ಕೇವಲ 12 ಸ್ಥಾನಗಳ ಕೊರತೆ ಇದೆ. ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ಸಿಎಂ ರೇಸ್ ನಲ್ಲಿ ಮೊದಲಿಗರಾಗಿದ್ದಾರೆ. ಅವರೇ ಬಹುತೇಕ ಮಹಾರಾಷ್ಟ್ರ ಮುಖ್ಯಮಂತ್ರಿಯಾಗುವ ಸಾಧ್ಯತೆ ದಟ್ಟವಾಗಿದೆ.
ಮತ್ತೆ ಸಿಎಂ ಆಗುವ ಆಸೆಯನ್ನು ಬಿಡದ ಶಿವಸೇನೆಯ ಏಕನಾಥ್ ಶಿಂಧೆ ಅವರು ಕೂಡ ಆಕಾಂಕ್ಷಿಯಾಗಿದ್ದು, ಹೆಚ್ಚು ಸ್ಥಾನ ಪಡೆದ ಪಕ್ಷದವರೇ ಮುಖ್ಯಮಂತ್ರಿ ಆಗಬೇಕು ಎಂದೇನಿಲ್ಲ ಎಂದು ಅವರು ಹೇಳಿದ್ದಾರೆ. ಬಹುತೇಕ ಇಂದೇ ಮಹಾರಾಷ್ಟ್ರ ಮುಖ್ಯಮಂತ್ರಿ ಆಯ್ಕೆಯ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.