alex Certify ಗಂಗಾವತಿಗೆ ಅಂಜನಾದ್ರಿ, ಬಾನಾಪುರ ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣಕ್ಕೆ ಶಿಫಾರಸು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಂಗಾವತಿಗೆ ಅಂಜನಾದ್ರಿ, ಬಾನಾಪುರ ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣಕ್ಕೆ ಶಿಫಾರಸು

ಬೆಂಗಳೂರು: ಕೊಪ್ಪಳ ಜಿಲ್ಲೆಯ ಗಂಗಾವತಿ ರೈಲು ನಿಲ್ದಾಣಕ್ಕೆ ಅಂಜನಾದ್ರಿ ಎಂದು ನಾಮಕರಣ ಮಾಡಲು ಶಿಫಾರಸು ಮಾಡಲಾಗಿದೆ.

ಮುನಿರಾಬಾದ್ ರೈಲು ನಿಲ್ದಾಣಕ್ಕೆ ಹುಲಿಗೆಮ್ಮದೇವಿ, ಬಾನಾಪುರ ರೈಲು ನಿಲ್ದಾಣಕ್ಕೆ ಮಹಾತ್ಮ ಗಾಂಧಿ ರೈಲು ನಿಲ್ದಾಣ ಎಂದು ಮರು ನಾಮಕರಣ ಮಾಡಬೇಕೆಂದು ಶಿಫಾರಸು ಮಾಡಲಾಗಿದೆ ಎಂದು ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಶಿಫಾರಸು ಕಳುಹಿಸಲಾಗಿದ್ದು, ಅವರ ಮೂಲಕ ಇದನ್ನು ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಿಕೊಡಲಾಗುವುದು. ಕಲ್ಯಾಣ ಕರ್ನಾಟಕ ಭಾಗದಲ್ಲಿ ಬರುವ ಗಂಗಾವತಿ, ಮುನಿರಾಬಾದ್, ಬಾನಾಪುರ ರೈಲು ನಿಲ್ದಾಣಗಳಿಗೆ ಮರು ನಾಮಕರಣ ಮಾಡುವುದರ ಮೂಲಕ ಜನರ ಭಾವನೆಗಳಿಗೆ ಮನ್ನಣೆ ನೀಡಿದಂತಾಗುತ್ತದೆ.

ಅಂಜನಾದ್ರಿಯು ರಾಮಾಯಣದಲ್ಲಿ ಬರುವ ಆಂಜನೇಯನ ಜನ್ಮಸ್ಥಳವಾಗಿದೆ. ಹುಲಿಗೆಮ್ಮದೇವಿ ಈ ಭಾಗದ ಜನಪ್ರಿಯ ಜನಪದ ದೇವತೆಯಾಗಿದೆ. ಮಹಾತ್ಮ ಗಾಂಧಿ ಅವರ ಹೆಸರಿಡುವುದರ ಹಿಂದೆ ಕೂಡ ಐತಿಹಾಸಿಕ ಕಾರಣವಿದೆ ಎಂದು ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...