ಬೆಂಗಳೂರು : ಸಾಧು ವಾಸ್ವಾನಿ ಜಯಂತಿ ಪ್ರಯುಕ್ತ ಇಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ.
ನ.25 ರಂದು ಸೋಮವಾರ ಬಿಬಿಎಂಪಿ ವ್ಯಾಪ್ತಿಯ ಕಸಾಯಿ ಖಾನೆಗಳಲ್ಲಿ ಪ್ರಾಣಿ ವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ. ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಬಿಬಿಎಂಪಿ ಪಶುಪಾಲನೆಯ ಜಂಟಿ ನಿರ್ದೇಶಕರು ಸೂಚನೆ ನೀಡಿದ್ದಾರೆ.