ನವದೆಹಲಿ : ಇಂದಿನಿಂದ ಸಂಸತ್ ಚಳಿಗಾಲದ ಅಧಿವೇಶನ ಆರಂಭ ಆಗಿದ್ದು, ಸುಗಮ ಕಲಾಪಕ್ಕೆ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಸೋಮವಾರದಿಂದ ಪ್ರಾರಂಭವಾಗುವ ನಾಲ್ಕು ವಾರಗಳ ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದರು, ಚುನಾವಣೆಯಲ್ಲಿ ಜನರು ತಿರಸ್ಕರಿಸಿದ ನಂತರ ಕೆಲವರು ಗೂಂಡಾಗಿರಿಯನ್ನು ಆಶ್ರಯಿಸುತ್ತಾರೆ.ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಕೊಡುತ್ತೇವೆ. ಜನರ ಸಮಸ್ಯೆಗಳ ಬಗ್ಗೆ ಪ್ರಾಮಾಣಿಕವಾಗಿ ಚರ್ಚೆ ನಡೆಯಬೇಕಿದೆ. ಎಂದು ಹೇಳಿದರು.
#WATCH | #ParliamentWinterSession | Prime Minister Narendra Modi says “The last phase of 2024 is underway and the country is preparing for 2025. This Session of Parliament is special in several ways and the most important thing is the beginning of the 75th year of the… pic.twitter.com/lRgEy6lPr3
— ANI (@ANI) November 25, 2024
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲನ್ನು ಉಲ್ಲೇಖಿಸಿದ ಪ್ರಧಾನಿ ನರೇಂದ್ರ ಮೋದಿ, “ಜನರು ಅವರನ್ನು ಮತ್ತೆ ಮತ್ತೆ ತಿರಸ್ಕರಿಸಬೇಕು” ಎಂದು ಹೇಳಿದರು. ಸಂಸತ್ತಿನಲ್ಲಿ ಜವಾಬ್ದಾರಿಯುತ ನಡವಳಿಕೆಯ ಮಹತ್ವವನ್ನು ಒತ್ತಿಹೇಳಿದ ಅವರು, ಸಾರ್ವಜನಿಕ ಭಾವನೆಯನ್ನು ಗೌರವಿಸುವಂತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಎತ್ತಿಹಿಡಿಯುವಂತೆ ಪ್ರತಿಪಕ್ಷಗಳನ್ನು ಒತ್ತಾಯಿಸಿದರು. ಇಂದಿನಿಂದ ಡಿಸೆಂಬರ್ 20ರವರೆಗೆ ಸಂಸತ್ ಚಳಿಗಾಲದ ಅಧಿವೇಶನ ನಡೆಯಲಿದೆ.
#WATCH | #ParliamentWinterSession | Prime Minister Narendra Modi says “The public has to reject them (Opposition) again and again…It is a condition of democracy that we respect the feelings of the people and work hard day and night to live up to their hopes and expectations.… pic.twitter.com/pNHKtcXYxF
— ANI (@ANI) November 25, 2024