HomeKarnatakaBREAKING NEWS: ಡೆತ್ ನೋಟ್ ಬರೆದಿಟ್ಟು ಜಿಲ್ಲಾ ರೈತ ಸಂಘದ ಅಧ್ಯಕ್ಷ ಆತ್ಮಹತ್ಯೆಗೆ ಯತ್ನ

BREAKING NEWS: ಡೆತ್ ನೋಟ್ ಬರೆದಿಟ್ಟು ಜಿಲ್ಲಾ ರೈತ ಸಂಘದ ಅಧ್ಯಕ್ಷ ಆತ್ಮಹತ್ಯೆಗೆ ಯತ್ನ

ರಾಯಚೂರು: ರಾಯಚೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ ಡೆತ್ ನೋಟ್ ಬರೆದಿಟ್ಟು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಲಿಂಗಸಗೂರಿನಲ್ಲಿ ನಡೆದಿದೆ.

ಶಿವಪುತ್ರಪ್ಪ (42) ಆತ್ಮಹತ್ಯೆಗೆ ಯತ್ನಿಸಿದ ರಾಯಚೂರು ಜಿಲ್ಲಾ ರೈತ ಸಂಘದ ಅಧ್ಯಕ್ಷ. ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಗಲಾಟೆ ನಡೆದಿತ್ತು. ಇದೇ ವಿಚಾರವಾಗಿ ಸಹೋದರರ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿ ಡೆತ್ ನೋಟ್ ಬರೆದಿಟ್ಟು ಶಿವಪುತ್ರಪ್ಪ, ವಿಷ ಸೇವಿಸಿದ್ದಾರೆ.

ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಬಾಗಲಕೋಟೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
RELATED ARTICLES

Most Popular