ಬೆಂಗಳೂರು : ಬೆಂಗಳೂರಿನಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಧಿಕೃತ ಚಾಲನೆ ನೀಡಿದರು.
ಇಂದಿನಿಂದ 1 ವಾರ ಬೆಂಗಳೂರಿನ ಬಸವನಗುಡಿಯಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. 1 ವಾರ ನಡೆಯಲಿರುವ ಕಡಲೆಕಾಯಿ ಪರಿಷೆಗೆ ಲಕ್ಷಾಂತರ ಜನರು ಬರುವ ನಿರೀಕ್ಷೆಯಿದೆ.
ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್ಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ಹಾಗೂ ಕಡಲೆಕಾಯಿ ಪರಿಷೆಯನ್ನು ಪ್ಲಾಸ್ಟಿಕ್ ಮುಕ್ತವಾಗಿ ಪರಿಷೆಯನ್ನು ಮಾಡಲು ಕರೆ ನೀಡಲಾಗಿದ್ದು, ಪರಿಷೆಗೆ ಬನ್ನಿ , ಬಟ್ಟೆ ಬ್ಯಾಗ್ ತನ್ನಿ ಎಂದು ಕರೆ ನೀಡಲಾಗಿದೆ. ಈ ಬಾರಿ ಪ್ಲಾಸ್ಟಿಕ್ ಮುಕ್ತ ಪರಿಷೆಯನ್ನು ಜಾರಿಗೆ ತರಲು ಪಣ ತೊಡಲಾಗಿದ್ದು ಪ್ಲಾಸ್ಟಿಕ್ ಬಳಸದಂತೆ ವ್ಯಾಪಾರಿಗಳಲ್ಲಲಿ ಜಾಗೃತಿ ಮೂಡಿಸಲು ಪಾಲಿಕೆ ಹಾಗೂ ಮುಜರಾಯಿ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ.