alex Certify ‘ನೇಕಾರ ಸಮ್ಮಾನ್ ಯೋಜನೆ’ಯಡಿ ಸಿಗಲಿದೆ 5000 ಆರ್ಥಿಕ ನೆರವು, ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ.! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ನೇಕಾರ ಸಮ್ಮಾನ್ ಯೋಜನೆ’ಯಡಿ ಸಿಗಲಿದೆ 5000 ಆರ್ಥಿಕ ನೆರವು, ಅರ್ಜಿ ಸಲ್ಲಿಸಲು ನ.30 ಕೊನೆಯ ದಿನ.!

ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ 2024-25ನೇ ಸಾಲಿಗೆ ನೇಕಾರ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿರುವ ಪ್ರತಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರಿಗೆ ವಾರ್ಷಿಕ ರೂ.5000/- ಗಳ ಆರ್ಥಿಕ ನೆರವನ್ನು ನೀಡುವ ಸಲುವಾಗಿ ಸೇವಾ ಸಿಂಧು ಪೋರ್ಟಲ್ ನಲ್ಲಿ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ನೇಕಾರರ ಮಾಹಿತಿಯನ್ನು ಆಪ್ ಲೋಡ್ ಮಾಡಲು ಅನುಕೂಲವಾಗುವಂತೆ ಅವಧಿಯನ್ನು ವಿಸ್ತರಣೆ ಮಾಡಿ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಜಿಲ್ಲೆಯ ಕೈಮಗ್ಗ ಮತ್ತು ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವಘಟಕಗಳ ಮಾಲಿಕರು/ ನೇಕಾರರು/ಕಾರ್ಮಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಪ ನಿರ್ದೇಶಕರ ಕಛೇರಿ, ಗಾರ್ಮೆಂಟ್ಸ್ ತರಬೇತಿ ಕೇಂದ್ರದ ಕಟ್ಟಡ, ಕೆಐಎಡಿಬಿ ಅಪೇರಲ್ ಪಾರ್ಕ್, ದೊಡ್ಡಬಳ್ಳಾಪುರ, ಈ ಕಛೇರಿಯಿಂದ ಅರ್ಜಿಯನ್ನು ಪಡೆದು ದಾಖಲಾತಿಗಳೊಂದಿಗೆ ನವ್ಹೆಂಬರ್ 30 ರೊಳಗಾಗಿ ಸಲ್ಲಿಸಬಹುದಾಗಿದೆ ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...