ಬೆಂಗಳೂರು: ಕಾರ್ ಹರಿದು ಮೂರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಸಂಭವಿಸಿದೆ.
ಬನ್ನೇರುಘಟ್ಟ ರಸ್ತೆಯ ಶನೇಶ್ಚರ ದೇವಾಲಯದ ಬಳಿ ಘಟನೆ ನಡೆದಿದೆ. ಮಾದಪಟ್ಟಣದ ಮೂರು ವರ್ಷದ ಏಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶನೇಶ್ಚರ ದೇವಸ್ಥಾನದ ಬಳಿ ಕಡ್ಲೆಕಾಯಿ ಜಾತ್ರೆ ನಡೆಯುತ್ತಿತ್ತು. ದೇವಸ್ಥಾನದಿಂದ ತಾಯಿ ಮತ್ತು ಮಗು ಹೊರಗೆ ಬಂದಿದ್ದಾರೆ. ಈ ವೇಳೆ ಕಾರ್ ಹರಿದು ಏಕಾಶ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಆನೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.