alex Certify ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಾಹನಗಳಿಗೆ ಪ್ಯಾನಿಕ್ ಬಟನ್ ಅಳವಡಿಕೆ ಕಡ್ಡಾಯ: ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ

ಬೆಂಗಳೂರು: ವಾಹನಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ ಬಟನ್ ಅಳವಡಿಕೆಗೆ ಸಂಬಂಧಿಸಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಟ್ರ್ಯಾಕಿಂಗ್ ಸಿಸ್ಟಮ್ ಹಾಗೂ ಪ್ಯಾನಿಕ್ ಬಟನ್ ಅಳವಡಿಸದಿದ್ದರೆ ಫಿಟ್ನೆಸ್ ಸರ್ಟಿಫಿಕೇಟ್ ನವೀಕರಣ ಮಾಡದಂತೆ ನಿರ್ದೇಶಿಸಿ ರಾಜ್ಯ ಸಾರಿಗೆ ಇಲಾಖೆ ಹೊರಡಿಸಿದ ಆದೇಶ ಪ್ರಶ್ನಿಸಿ ಪ್ರವಾಸಿ ಟ್ಯಾಕ್ಸಿ ಮಾಲೀಕರ ಸಂಘ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನೋಟಿಸ್ ನೀಡಿದೆ.

ಅರ್ಜಿದಾರರ ಪರ ವಕೀಲ ಬಿ.ಆರ್. ಸುಂದರ್ ರಾಜ್ ಗುಪ್ತಾ ಅವರು ಫಿಟ್ನೆಸ್ ಸರ್ಟಿಫಿಕೇಟ್ ಇಲ್ಲದಿದ್ದರೆ ವಾಹನ ಓಡಿಸಲು ಸಾಧ್ಯವಾಗುವುದಿಲ್ಲ. ಸರ್ಕಾರದ ಸೂಚನೆಯಂತೆ ನವೆಂಬರ್ 30ಕ್ಕೆ ಗಡುವು ಮುಗಿಯಲಿದೆ. ಇದರಿಂದ ಟ್ಯಾಕ್ಸಿ ಮಾಲೀಕರು ಚಾಲಕರಿಗೆ ಕಷ್ಟವಾಗುತ್ತದೆ. ಕೆಎಸ್ಆರ್ಟಿಸಿ ಬಸ್ ಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ, ಖಾಸಗಿ ವಾಹನಗಳಿಗೆ ವಿನಾಯಿತಿ ನೀಡಿಲ್ಲ. ಈ ಮೂಲಕ ತಾರತಮ್ಯ ಎಸಗಿದ್ದು, ಸರ್ಕಾರದ ಅಧಿಸೂಚನೆಗೆ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದ್ದಾರೆ. ವಿಚಾರಣೆ ಆಲಿಸಿದ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...