HomeKarnatakaBIG NEWS: ರಾಜ್ಯಾದ್ಯಂತ ಏಕರೂಪದ ತೆರಿಗೆ ವಸೂಲಿಗೆ ಹೊಸ ಕಾಯ್ದೆ ಜಾರಿ: ಎ, ಬಿ ಖಾತಾಗಳಾಗಿ...

BIG NEWS: ರಾಜ್ಯಾದ್ಯಂತ ಏಕರೂಪದ ತೆರಿಗೆ ವಸೂಲಿಗೆ ಹೊಸ ಕಾಯ್ದೆ ಜಾರಿ: ಎ, ಬಿ ಖಾತಾಗಳಾಗಿ ಎಲ್ಲಾ ಆಸ್ತಿಗಳ ವಿಂಗಡಣೆ

ಶಿವಮೊಗ್ಗ: ಬಿಬಿಎಂಪಿ ಮಾದರಿಯಲ್ಲಿ ರಾಜ್ಯದಾದ್ಯಂತ ಎಲ್ಲಾ ಆಸ್ತಿಗಳನ್ನು ಎ ಮತ್ತು ಬಿ ಖಾತಾಗಳಾಗಿ ವಿಂಗಡಿಸಿ ರಾಜ್ಯಾದ್ಯಂತ ಏಕರೀತಿಯ ಕರ ವಸೂಲಿ ಮಾಡಲು ಹೊಸ ಕಾಯ್ದೆಯನ್ನು ತಿಂಗಳೊಳಗೆ ಜಾರಿಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ರಹೀಂ ಖಾನ್ ತಿಳಿಸಿದ್ದಾರೆ.

ಶಿವಮೊಗ್ಗ ನಗರ ಪಾಲಿಕೆ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ಎಲ್ಲಾ ಸ್ಥಳೀಯ ಸಂಸ್ಥೆಗಳ ಮುಖ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತಿಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸ್ಥಳೀಯ ಸಂಸ್ಥೆಗಳಿಗೆ ನಿಯಮಾನುಸಾರ ಸಾರ್ವಜನಿಕರಿಂದ ಪಾವತಿಯಾಗಬೇಕಾದ ಕರ ವಸೂಲಿ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಏಕ ರೀತಿಯ ಕರ ವಸೂಲಾತಿಗೆ ಹೊಸ ಕಾಯ್ದೆ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಎಲ್ಲಾ ನಗರ, ಪಟ್ಟಣ ಪ್ರದೇಶಗಳಲ್ಲಿ ಇತ್ತೀಚಿನ ಕೆಲವು ದಶಕಗಳಿಂದ ನಿರ್ಮಾಣವಾಗಿರುವ ಬಡಾವಣೆಗಳಲ್ಲಿ ಅಧಿಕೃತವಾಗಿ, ಇನ್ನು ಕೆಲವು ಕಡೆ ಪರವಾನಿಗೆ ಪಡೆಯದೆ ಅನಧಿಕೃತವಾಗಿ ನಿರ್ಮಾಣವಾದ ಎಲ್ಲಾ ಕಟ್ಟಡಗಳಿಗೆ ಮೂಲ ಸೌಕರ್ಯ ಒದಗಿಸುತ್ತಿದ್ದು, ಇದಕ್ಕೆ ಪೂರಕವಾಗಿ ಸ್ಥಳೀಯ ಸಂಸ್ಥೆಗಳಿಗೆ ಸಂದಾಯವಾಗಬೇಕಿದ್ದ ಭಾರಿ ಪ್ರಮಾಣದ ತೆರಿಗೆ ವಸೂಲಾಗದೆ ಬಾಕಿ ಉಳಿದಿದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular