HomeIndiaBIG BREAKING: ಆರ್.ಬಿ.ಐ. ಗವರ್ನರ್‌ ಶಕ್ತಿಕಾಂತ್‌ ದಾಸ್‌ ಆಸ್ಪತ್ರೆಗೆ ದಾಖಲು

BIG BREAKING: ಆರ್.ಬಿ.ಐ. ಗವರ್ನರ್‌ ಶಕ್ತಿಕಾಂತ್‌ ದಾಸ್‌ ಆಸ್ಪತ್ರೆಗೆ ದಾಖಲು

ಎದೆನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾದ ಗವರ್ನರ್‌ ಶಕ್ತಿಕಾಂತ್‌ ದಾಸ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ ಶಕ್ತಿಕಾಂತ್‌ ದಾಸ್‌ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಕಾರಣ ಕೂಡಲೇ ಅವರನ್ನು ಚೆನ್ನೈನ ಅಪೊಲೋ ಅಸ್ಪತ್ರೆಗೆ ದಾಖಲಿಸಲಾಗಿದೆ.

ತಜ್ಞ ವೈದ್ಯರ ತಂಡ ಶಕ್ತಿಕಾಂತ್‌ ದಾಸ್‌ ಅವರ ಆರೋಗ್ಯ ಪರಿಸ್ಥಿತಿ ಕುರಿತು ತೀವ್ರ ನಿಗಾ ವಹಿಸಿದ್ದು, ತುರ್ತು ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular