ಬೆಂಗಳೂರು : ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಂದಿರಾನಗರ ಅಪಾರ್ಟ್ ಮೆಂಟ್ ಒಂದರಲ್ಲಿ ನಡೆದಿದೆ.
ಕೊಲೆಯಾದ ಯುವತಿಯನ್ನು ಅಸ್ಸಾಂ ಮೂಲಕ ಮಾಯಾ ಗೊಗಾಯ್ ಎಂದು ಗುರುತಿಸಲಾಗಿದೆ. ಕೊಲೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ.
ಹೆಚ್ ಎಸ್ ಆರ್ ಲೇಔಟ್ ನಲ್ಲಿ ವಾಸವಿದ್ದ ಮಾಯಾ ಪ್ರಿಯಕರನಿದ್ದ ಹೋಟೆಲ್ ರೂಮ್’ಗೆ ಬಂದಿದ್ದಳು ಎನ್ನಲಾಗಿದೆ. ಈ ವೇಳೆ ಆತ ಕೊಲೆ ಮಾಡಿ ಪರಾರಿಯಾಗಿದ್ದಾನೆ ಎನ್ನಲಾಗಿದ.
ಘಟನೆ ನಡೆದ ಸ್ಥಳಕ್ಕೆ ಇಂದಿರಾನಗರದ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರೈಮ್ ಹೆಚ್ಚುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ.