ಬೆಂಗಳೂರು: ಬೆಂಗಳೂರಿನಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆಫ್ರಿಕಾ ಪ್ರಜೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸ ವರ್ಷಾಚರಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮಾದಕ ವಸ್ತುಗಳ ವಿರುದ್ಧ ಸಮರ ಸಾರುರುವ ಪೊಲೀಸರು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ವಿದೇಶಿ ಪ್ರಜೆ ಸೇರಿ ಮೂವರನ್ನು ಬಧಿಸಿದ್ದಾರೆ.
ಕೌಸ್ಸಿ ಜೂಲಿಯಸ್ ಗಿಸ್ಸರ್ ಸೇರಿ ಮೂವರನ್ನು ಬಂಧಿಸಲಾಗಿದೆ. ಕೌಸ್ಸಿ ಜೂಲಿಯಸ್ ಗಿಸ್ಸರ್ ಸೋಲದೇವನಹಳ್ಳಿ ಠಾಣೆ ವ್ಯಾಪ್ತಿಯ ಆರ್.ಆರ್.ಕಾಲೇಜು ರಸ್ತೆಯಲ್ಲಿ ಎಂಡಿಎಂಎ ಕ್ರಿಸ್ಟಲ್ ಮಾರಾಟ ಮಾಡುತ್ತಿದ್ದ. ಈತ 2017ರಲ್ಲಿ ಬಿಸಿನೆಸ್ ವೀಸಾ ಪಡೆದು ಭಾರತಕ್ಕೆ ಬಂದಿದ್ದ. ಕಡಿಮೆ ಬೆಲೆಯಲ್ಲಿ ಎಂಡಿಎಂಎ ಕ್ರಿಸಲ್ ಗಳನ್ನು ಖರೀದಿಸಿ ಗ್ರಾಂ ಗೆ 12-15 ಸಾವಿರಕ್ಕೆ ಕಾಲೇಜು ವಿದ್ಯಾರ್ಥಿಗಳು, ಐಟಿ-ಬಿಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದ.
ಇನ್ನು ಮಾರತ್ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಾಗೂ ಸಂಪಿಗೆಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಬ್ಬರು ಗಾಂಜಾ ಮಾರಾಟಗಾರರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಒಟ್ಟು 86.50 ಲಕ್ಷ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.