ಬೆಂಗಳೂರು : ಪ್ರಸಕ್ತ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ವಿದ್ಯಾರ್ಥಿ ವೇತನ, ಶುಲ್ಕವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ” ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ನವೆಂಬರ್ 30 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಪಿ.ಪಿ.ಕವಿತಾ ಅವರು ತಿಳಿಸಿದ್ದಾರೆ.
ಆನ್ಲೈನ್ ವೆಬ್ಸೈಟ್ವಿಳಾಸ: https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗಾಗಿ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಸಂಪರ್ಕಿಸಬಹುದಾದ ಇಲಾಖಾ ಸಹಾಯವಾಣಿ ಸಂಖ್ಯೆ:8050770005, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್:postmatrichelp@karnataka.gov.in, ದೂರವಾಣಿ ಸಂಖ್ಯೆ:08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.