ಬೆಂಗಳೂರು : ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬಡ್ಡಿ ಮತ್ತು ದಂಡಕ್ಕೆ ವಿನಾಯಿತಿ ನೀಡಲಾಗಿರುವ ಒಟಿಎಸ್ ಯೋಜನೆಯನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕು.
ಇಲ್ಲದಿದ್ದರೆ ಡಿಸೆಂಬರ್ 1 ರಿಂದ ಸುಮಾರು ಎರಡು ಪಟ್ಟು ಹೆಚ್ಚು ಪಾವತಿಸಬೇಕಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಆನ್ಲೈನ್ ಮೂಲಕ ಪಾವತಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ(https://bbmptax.karnataka.gov.in/
ಆಸ್ತಿ ತೆರಿಗೆ ಎಷ್ಟು ಪಾವತಿಸಬೇಕಿದೆ, ಎಲ್ಲಿ ಪಾವತಿಸಬೇಕು ಎಂಬ ಬಗ್ಗೆ ಗೊಂದಲಗಳಿದ್ದಲ್ಲಿ ಸಹಾಯವಾಣಿ 1533 ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪ್ರಕಟಣೆ ಹೊರಡಿಸಿದೆ.ಬಿಬಿಎಂಪಿ ಕಾಯ್ದೆಯಲ್ಲಿ ಆಸ್ತಿತೆರಿಗೆ ಬಾಕಿ ವಸೂಲಾತಿಗೆ ಅವಕಾಶವಿದೆ. ಆದಾಗ್ಯೂ, ಒಟಿಎಸ್ ನಾಗರಿಕರಿಗೆ ಸಹಾಯ ಮಾಡಲು ಸರ್ಕಾರ ಮತ್ತು ಬಿಬಿಎಂಪಿಯೂ ಜೊತೆಯಾಗಿ ಕಾರ್ಯನಿರ್ವಹಿಸಲಿದೆ .ನಾಗರಿಕರು https://bbmptax.karnataka.gov.in ಮೂಲಕ ಆನ್ಲೈನ್ ನಲ್ಲಿ ಆಸ್ತಿತೆರಿಗೆಯನ್ನು ಸುಲಭವಾಗಿ ಪಾವತಿಸಬಹುದು ಎಂದು ಪ್ರಕಟಣೆ ಹೊರಡಿಸಿದೆ.
ಓಟಿಎಸ್ (ಒನ್ ಟೈಮ್ ಸೆಟ್ಲಮೆಂಟ್) ಯೋಜನೆಯಡಿ ಆಸ್ತಿ ತೆರಿಗೆ ಪಾವತಿಸಲು ಕಟ್ಟಕಡೆಯ ಅವಕಾಶ ನೀಡಲಾಗುತ್ತಿದ್ದು, ನವೆಂಬರ್ 30ರವರೆಗೆ ಮಾತ್ರ ಇದು ಚಾಲ್ತಿಯಲ್ಲಿರಲಿದೆ. ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬಹುದಾಗಿದೆ.
ಒಂದು ಬಾರಿ ಪರಿಹಾರ ಯೋಜನೆ (ಒಟಿಎಸ್) ನವೆಂಬರ್ 30 ರಂದು ಮುಕ್ತಾಯಗೊಳ್ಳಲಿದ್ದು, ಆ ವೇಳೆಗೆ ಒಟ್ಟು ₹4 ಸಾವಿರ ಕೋಟಿ ಆಸ್ತಿ ತೆರಿಗೆ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಬಡ್ಡಿ ಮತ್ತು ದಂಡಕ್ಕೆ ವಿನಾಯಿತಿ ನೀಡಲಾಗಿರುವ ಒಟಿಎಸ್ ಯೋಜನೆಯನ್ನು ನಾಗರಿಕರು ಸದುಪಯೋಗಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಡಿಸೆಂಬರ್ 1 ರಿಂದ ಸುಮಾರು ಎರಡು ಪಟ್ಟು… pic.twitter.com/WIOkbng5nY
— DIPR Karnataka (@KarnatakaVarthe) November 26, 2024