ಬೆಂಗಳೂರು : ನ.28 ರೊಳಗೆ ಬಿಪಿಎಲ್ ಕಾರ್ಡ್ ಸಮಸ್ಯೆ ಇತ್ಯರ್ಥ ಮಾಡಲಾಗುತ್ತದೆ, ನ. 29ರಿಂದ ಪಡಿತರ ವಿತರಣೆ ಆರಂಭಿಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಮುನಿಯಪ್ಪ ಹೇಳಿದ್ದಾರೆ.
ಎಲ್ಲಾ ಪಡಿತರ ಕಾರ್ಡ್ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನವೆಂಬರ್ 28ರ ಒಳಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ ಎಲ್ಲಾ ಸೌಲಭ್ಯಗಳೊಂದಿಗೆ ಅಕ್ಕಿಯನ್ನು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡ್ಗಳನ್ನು ಎಪಿಎಲ್ಗೆ ವರ್ಗಾಯಿಸಲಾಗುವುದು ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ.
ಒಂದೂವರೆ ತಿಂಗಳ ಹಿಂದೆ ರದ್ದು ಮಾಡಿದ್ದ ಎಲ್ಲಾ ಪಡಿತರ ಚೀಟಿಗಳನ್ನು ನವೆಂಬರ್ 28 ರೊಳಗೆ ಮರು ಸಕ್ರಿಯಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಈ ಕಾರ್ಯ ಭರದಿಂದ ಸಾಗಿದೆ. ಬಿಪಿಎಲ್ ಕಾರ್ಡ್ ದಾರರಿಗೆ ಯಾವುದೇ ಕಾರಣಕ್ಕೂ ಪಡಿತರ ತಪ್ಪಿಸುವುದಿಲ್ಲ. ಕಾರ್ಡ್ ರದ್ದಾದ ಕಾರಣ ಕಳೆದ ಎರಡು ತಿಂಗಳಿಂದ ಸಿಗದೇ ಇರುವ ಎಲ್ಲಾ ಸೌಲಭ್ಯಗಳು ಅರ್ಹರಿಗೆ ದೊರೆಯಲಿದೆ. ಎಲ್ಲಾ ಅರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮರು ಸಕ್ರಿಯಗೊಳಿಸಲಾಗುತ್ತಿದ್ದು, ಎಂದಿನಂತೆಯೇ ಅಕ್ಕಿ, ಖಾತೆಗೆ ಹಣ ಸೇರಿ ಎಲ್ಲಾ ಸೌಲಭ್ಯಗಳ ದೊರೆಯಲಿದೆ ಎಂದು ಹೇಳಿದ್ದಾರೆ.
ಎಲ್ಲಾ ಪಡಿತರ ಕಾರ್ಡ್ಗಳನ್ನು ಯಥಾವತ್ತಾಗಿ ಮುಂದುವರಿಸಲು ಮುಖ್ಯಮಂತ್ರಿಗಳ ಆದೇಶದಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ನವೆಂಬರ್ 28ರ ಒಳಗೆ ಬಿಪಿಎಲ್ ಪಡಿತರ ಚೀಟಿದಾರರಿಗೆ ಎಲ್ಲಾ ಸೌಲಭ್ಯಗಳೊಂದಿಗೆ ಅಕ್ಕಿಯನ್ನು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ತೆರಿಗೆ ಪಾವತಿದಾರರು ಮತ್ತು ಸರ್ಕಾರಿ ನೌಕರರ ಅನರ್ಹ ಪಡಿತರ ಕಾರ್ಡ್ಗಳನ್ನು… pic.twitter.com/grBTOaT0s7
— DIPR Karnataka (@KarnatakaVarthe) November 26, 2024