HomeKarnatakaಪ್ರವಾಸಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ 'QR ಕೋಡ್' ಮೂಲಕ ಹಂಪಿಯ ಶಿಲೆಗಳ ಸಂಗೀತ ಆಲಿಸಬಹುದು

ಪ್ರವಾಸಿಗರಿಗೆ ಗುಡ್ ನ್ಯೂಸ್ : ಇನ್ಮುಂದೆ ‘QR ಕೋಡ್’ ಮೂಲಕ ಹಂಪಿಯ ಶಿಲೆಗಳ ಸಂಗೀತ ಆಲಿಸಬಹುದು

ಬಳ್ಳಾರಿ : ವಿಶ್ವ ಪ್ರಸಿದ್ದ ಹಂಪಿಗೆ ಬರುವ ಪ್ರವಾಸಿಗರು ಇನ್ಮುಂದೆ ಸಂಗೀತ ಸ್ವಾದವನ್ನು ಕ್ಯೂ ಆರ್ ಕೋಡ್ ಮೂಲಕ ಆಸ್ವಾದಿಸಬಹುದು.

ಹೌದು. ಹಂಪಿಯ ವಿಜಯ ವಿಠ್ಠಲ ದೇವಸ್ಥಾನದ ಸಂಗೀತ ಮಂಟಪದಲ್ಲಿನ ಶಿಲಾ ಕಂಬಗಳನ್ನು ಮೀಟಿದರೆ ಬರುವ ಸಂಗೀತ ತರಂಗವನ್ನು ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಆಲಿಸಬಹುದು.

ಕಂಬಗಳನ್ನು ನಿರಂತರ ಮೀಟಿದರೆ ಅವು ಶಿಥಿಲಗೊಳ್ಳುವ ಸಾಧ್ಯತೆ ಹೆಚ್ಚು. ಈ ಕಾರಣಕ್ಕಾಗಿಯೇ ಕ್ಯೂಆರ್ ಕೋಡ್ ವ್ಯವಸ್ಥೆ ಮಾಡಲಾಗಿದೆ. ಪ್ರವಾಸಿಗರು ಅದನ್ನು ಸ್ಕ್ಯಾನ್ ಮಾಡಿದರೆ ಶಿಲೆಗಳ ಸಂಗೀತವನ್ನು ಕೇಳಬಹುದು.
ಭಾರತೀಯ ಪುರಾತತ್ವ ಸರ್ವೇಕ್ಷಣ ಇಲಾಖೆ ವತಿಯಿಂದ ಹಂಪಿಯ ವಿಜಯ ವಿಠಲ ದೇವಸ್ಥಾನದ ಸಂಗೀತ ಮಂಟಪದಲ್ಲಿ ಸಂಗೀತದ ಕಂಬಗಳಿಗೆ ಕ್ಯೂ ಆರ್ ಕೋಡ್ ಅಳವಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular