HomeKarnatakaBREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದಂಪತಿ ದುರ್ಮರಣ

BREAKING NEWS: ಕೆ.ಎಸ್.ಆರ್.ಟಿ.ಸಿ ಬಸ್ ಹರಿದು ದಂಪತಿ ದುರ್ಮರಣ

ಚಿಕ್ಕಬಳ್ಳಾಪುರ: ಕೆ.ಎಸ್.ಆರ್.ಟಿ.ಸಿ ಬಸ್, ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಆದರ್ಶ್ ಟಾಕೀಸ್ ಬಳಿ ನಡೆದಿದೆ.

ಬಸ್ ಬೈಕ್ ಗೆ ಡಿಕ್ಕಿ ಹೊಡೆದು, ಕೆಳಗೆ ಬಿದ್ದ ದಂಪತಿಯ ಮೇಲೆಯೇ ಬಸ್ ಹರಿದಿದೆ. ಕೊಮ್ಮಸಂದ್ರ ಗ್ರಾಮದ ವೆಂಕಟೇಶ್ (40) ಹಾಗೂ ಸರಸ್ವತಮ್ಮ (34) ಮೃತ ದುರ್ದೈವಿಗಳು. ಸರಸ್ವತಮ್ಮ ಪತಿ ವೆಂಕಟೇಶ್ ಜೊತೆ ತವರುಮನೆಗೆಂದು ಹೋಗುತ್ತಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ಚಿಂತಾಮಣಿ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular