BIG NEWS: ಲಾಕಪ್ ಡೆತ್ ಕೇಸ್: ನಾಲ್ವರು ಪೊಲೀಸರಿಗೆ ಜೈಲು ಶಿಕ್ಷೆ ಪ್ರಕಟ

ಬೆಂಗಳೂರು: ಪೊಲೀಸರ ವಶದಲ್ಲಿದ್ದ ಆರೋಪಿ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಸಬಂಧಿಸಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಬೆಂಗಳೂರಿನ ಸಿಐಡಿ ವಿಶೇಷ ಕೋರ್ಟ್ ಜೈಲು ಶಿಕ್ಷೆ ವಿಧಿಸಿದೆ.

ಒಡಿಶಾ ಮೂಲದ ಮಹೇಂದ್ರ ರಾಥೋಡ್ (42) ಎಂಬಾತನ ಮೇಲೆ ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿ ಆತನ ಸಾವಿಗೆ ಕಾರಣರಾಗಿದ್ದ ಆರೋಪದಡಿ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಕೋರ್ಟ್, 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಜೀವನ್ ಭೀಮಾನಗರ ಠಾಣೆಯ ಅಂದಿನ ಅಪರಾಧ ವಿಭಾಗದ ಹೆಡ್ ಕಾನ್ಸ್ ಟೇಬಲ್ ಎಜಾಜ್ ಖಾನ್, ಕಾನ್ಸ್ ಟೇಬಲ್ ಗಲಾದ ಕೇಶವ ಮೂರ್ತಿ, ಮೋಹನ್ ರಾಮ್ ಹಾಗೂ ಸಿದ್ದಪ್ಪ ಬೊಮ್ಮನಹಳ್ಳಿ ಅವರಿಗೆ 7 ವರ್ಷಗಳ ಜೈಲು ಶಿಕ್ಷೆ ಹಾಗೂ 30 ಸಾವಿರ ಹಾಗೂ 25 ಸಾವಿರ ದಂಡ ವಿಧಿಸಲಾಗಿದೆ.

ಜೀವ ಭೀಮಾ ನಗರ ಠಾಣೆಯಲ್ಲಿ ದಾಖಲಾಗಿದ್ದ ಕಳ್ಳತನ ಪ್ರಕರಣ ಸಂಅಬ್ಂಧ ಶಂಕಿತ ಆರೋಪಿ ಮಹೇಂದ್ರ ರಾಥೋಡ್ ಎಂಬಾತನನ್ನು 2016ರ ಮಾರ್ಚ್ 19ರಂದು ಬಂಧಿಸಿ ಠಾಣೆಗೆ ಕರೆತರಲಾಗಿತ್ತು. ಅದೇ ದಿನ ಸಂಜೆ ಮಹೇಂದ್ರ ರಾಥೋಡ್ ಉಸಿರಾಟದ ತೊಂದರೆ, ಎದೆನೋವು ಕಣಿಸಿಕೊಂಡು ಕುಸಿದುಬಿದ್ದು ಸಾವನ್ನಪ್ಪಿದ್ದ. ಪೊಲೀಸ್ ಸಿಬ್ಬಂದಿಯ ನಿರ್ಲಕ್ಷ ಹಾಗೂ ದೈಹಿಕ ಹಲ್ಲೆ ಪರಿಣಾಮ ಆತ ಪೊಲೀಸ್ ವಶದಲ್ಲಿದ್ದಾಗಲೇ ಸಾವನ್ನಪ್ಪಿರುವುದು ಸಿಐಡಿ ತನಿಖೆಯಲ್ಲಿ ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಸಿಬ್ಬಂದಿಗಳಿಗೆ ಜೈಲು ಶಿಕ್ಷೆ ಪ್ರಕಟವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read